ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಬಿಜೆಪಿ ಸೇರ್ಪಡೆಗೆ ವಿರೋಧ: 15ಕ್ಕೂ ಹೆಚ್ಚು ಬಿಜೆಪಿ ಮುಖಂಡರು ರಾಜೀನಾಮೆ

ರಾಯಚೂರು, ಜ.22: ಲಿಂಗಸೂಗೂರಿನ ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿ 15ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಹಲವು ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.
ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಬಿಜೆಪಿ ಮುಖಂಡ ಸಿದ್ದು ವೈ. ಬಂಡಿ ರಾಜ್ಯ ಕಾರ್ಯಕಾರಣಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರೆ, ಅವರ ಬೆಂಬಲಿಗರು ವಿವಿಧ ಹುದ್ದೆಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.
ಹಲವು ವರ್ಷಗಳಿಂದ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇವೆ. ಆದರೆ, ಶಾಸಕರನ್ನ ಪಕ್ಷ ಸೇರ್ಪಡೆ ಮಾಡಿಕೊಳ್ಳವಾಗ ನಮ್ಮನ್ನು ಪರಿಗಣಿಸಿಲ್ಲ ಎಂದು ಸ್ಥಳೀಯ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಇನ್ನು ಸಿದ್ದುಬಂಡಿ ಲಿಂಗಸೂಗೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದೀಗ ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಸೇರ್ಪಡೆಯಾದ ಪರಿಣಾಮ ಅವರಿಗೆ ಟಿಕೆಟ್ ಕೈ ತಪ್ಪಲಿದೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ ಲಿಂಗಸೂಗೂರು ಪಟ್ಟಣದ ಕೇಂದ್ರ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಾವಚಿತ್ರ ದಹಿಸುವ ಮೂಲಕ ಸಿದ್ದು ಬಂಡಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.





