ಶಿವಮೊಗ್ಗ: ಆಟೋ ಚಾಲಕನ ಹತ್ಯೆ

ಶಿವಮೊಗ್ಗ, ಜ. 22: ಆಟೋ ಚಾಲಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯ ಗಾಡಿಕೊಪ್ಪದ ತುಂಗಾ ನಾಲೆ ಸಮೀಪದ ನಿರ್ಜನ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಶರಾವತಿ ನಗರದ ನಿವಾಸಿ ರಾಘವೇಂದ್ರ (36) ಕೊಲೆಗೀಡಾದ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಹತ್ಯೆ ನಡೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಸೋಮವಾರ ಬೆಳಿಗ್ಗೆ ಕೊಲೆಗೀಡಾದ ಶವ ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್‍ಪಿ ಸುದರ್ಶನ್, ಇನ್ಸ್ ಪೆಕ್ಟರ್ ಮಹಾಂತೇಶ್, ಸಬ್ ಇನ್ಸ್ ಪೆಕ್ಟರ್ ಗಿರೀಶ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದರು. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





