ಉಡುಪಿ, ಜ.22: ಜ.28ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವ ಸಬಲೀಕರಣ, ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದಾರೆ.
ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬೆಳಗ್ಗೆ 8 ಕ್ಕೆ ಪಲ್ಸ್ ಪೋಲಿಯೊ ಉದ್ಘಾಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.