ಜ.24ರಂದು ಅಹಿಂದ ಜನಚಳವಳಿಯಿಂದ 'ವಿಚಾರ ಸಂಕಿರಣ'
ಮಂಗಳೂರು, ಜ. 22: ದ.ಕ. ಜಿಲ್ಲಾ ಅಹಿಂದ ಜನಚಳವಳಿ ವತಿಯಿಂದ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಭಾವಿಯಾಗಿ ಜ.24ರಂದು ಮಧ್ಯಾಹ್ನ 3 ಗಂಟೆಗೆ ನಗರದ ವುಡ್‌ಲ್ಯಾಂಡ್ ಹೊಟೇಲ್‌ನಲ್ಲಿ ‘ಉನ್ನತ ನ್ಯಾಯಾಂಗ ಮತ್ತು ಸಂವಿಧಾನದ ಮಹತ್ವ’ ಎಂಬ ವಿಷಯದಲ್ಲಿ ವಿಚಾರ ಸಂಕಿರಣ ನಡೆಯಲಿದೆ.
ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ನಿಕಟಪೂರ್ವ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ನೆರವೇರಿಸಲಿದ್ದಾರೆ.
ಅಹಿಂದ ಜನಚಳವಳಿಯ ಅಧ್ಯಕ್ಷ ವಾಸುದೇವ ಬೋಳೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಬಂಗೇರ, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ಅಹಿಂದ ಜನಚಳವಳಿಯ ಗೌರವಾಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ, ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹಾಗೂ ಅಹಿಂದ ಜನಚಳವಳಿಯ ಕಾರ್ಯಾಧ್ಯಕ್ಷ ಪದ್ಮನಾಭ ನರಿಂಗಾನ ಭಾಗವಹಿಸಲಿದ್ದಾರೆ ಎಂದು ಅಹಿಂದ ಜನಚಳವಳಿಯ ಪ್ರಧಾನ ಕಾರ್ಯದರ್ಶಿ ಯೂಸುಫ್ ವಕ್ತಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





