Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ನಮ್ಮ ಸಾರಿಗೆ ಸಂಸ್ಥೆಯ ಸೇವೆಯೇ...

ದೇಶದಲ್ಲಿ ನಮ್ಮ ಸಾರಿಗೆ ಸಂಸ್ಥೆಯ ಸೇವೆಯೇ ಅತ್ಯುತ್ತಮ: ಎಚ್.ಎಂ.ರೇವಣ್ಣ

ಕೊಪ್ಪ ಸಾರಿಗೆ ಬಸ್ ನಿಲ್ದಾಣ ಲೋಕಾರ್ಪಣೆ,

ವಾರ್ತಾಭಾರತಿವಾರ್ತಾಭಾರತಿ22 Jan 2018 11:09 PM IST
share
ದೇಶದಲ್ಲಿ ನಮ್ಮ ಸಾರಿಗೆ ಸಂಸ್ಥೆಯ ಸೇವೆಯೇ ಅತ್ಯುತ್ತಮ: ಎಚ್.ಎಂ.ರೇವಣ್ಣ

ಮಂಡ್ಯ, ಜ.22: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ದೇಶದಲ್ಲಿ 210 ಬಾರಿ ಪ್ರಶಸ್ತಿ ಪಡೆದಿದ್ದು, ಸಾರ್ವಜನಿಕರಿಗೆ ನೀಡುತ್ತಿರುವ ಸೇವೆ ಇತರೆ ರಾಜ್ಯಗಳಿಗಿಂತ ಅತ್ಯುತ್ತಮವಾದದ್ದಾಗಿದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ.

ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಸೋಮವಾರ ನೂತನ ಬಸ್ ನಿಲ್ದಾಣದ ಉದ್ಘಾಟನೆ ಹಾಗೂ ಅಪಘಾತ ರಹಿತ ಚಾಲಕರಿಗೆ ಬೆಳ್ಳಿಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಸಾರಿಗೆ ಸಂಪರ್ಕ ಅವಶ್ಯಕವಾಗಿದೆ ಎಂದರು.

ಹಳ್ಳಿಯಲ್ಲಿನ ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ಸಾರಿಗೆ ಸಂಸ್ಥೆಯ ಬಸ್‍ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಈ ನಿಟ್ಟಿನಲ್ಲಿ ಸರಕಾರ ಮಂಡ್ಯ ವಿಭಾಗದ ಸಾರಿಗೆ ವ್ಯವಸ್ಥೆಗಾಗಿ 93 ಹೊಸ ಬಸ್‍ಗಳನ್ನು ನೀಡಿದೆ. 32 ಗುಂಟೆ ವಿಸ್ತೀರ್ಣದಲ್ಲಿ 171 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ನಿಲ್ದಾಣದ ಹೆಚ್ಚುವರಿ ಅಭಿವೃದ್ಧಿಗೆ 1.40  ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಶಿಸ್ತುಬದ್ದವಾಗಿ, ಅತಿ ಹೆಚ್ಚು ದಿನ ಕರ್ತವ್ಯ ನಿರ್ವಹಿಸಿ, ಅಪರಾಧ ರಹಿತ ಮತ್ತು ಅಪಘಾತ ರಹಿತ 598 ಚಾಲಕರಿಗೆ ಗಣರಾಜ್ಯತ್ಸೋವದಂದು ಪ್ರಶಸ್ತಿ ನೀಡಿ ಗೌರವಿಸಲಾಗುವುದು, ಅವರ ಬೆನ್ನು ತಟ್ಟುವ ಕೆಲಸವನ್ನು ಮಾಡಲಾಗುವುದು ಎಂದು ಅವರು ತಿಳಿಸಿದರು.

ಸರಕಾರವು ಜನರ ಶ್ರೇಯೋಭಿವೃದ್ಧಿಗೆ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳಲು ಮುಂದಾಗಬೇಕು. ಬಿ.ಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಜಾತಿ ಭೇದವಿಲ್ಲದೇ, ಸರಕಾರದ ಯೋಜನೆಗಳನ್ನು ಮುಟ್ಟಿಸುವಲ್ಲಿ ನಾವು ಯಶಸ್ವಿಯಾಗಿದ್ದೆವೆ ಎಂದು ಸಚಿವರು ನುಡಿದರು.

ಶಾಸಕ ಎನ್.ಚಲುವರಾಯಸ್ವಾಮಿ ಮಾತನಾಡಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚಾಲಕರು ಅಪಘಾತ ಮಾಡದೇ ವೃತ್ತಿ ಬದುಕನ್ನು ಪೂರೈಸಬೇಕು ಎಂದು ಸಲಹೆ ನೀಡಿದರು. 

ಸರಕಾರ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಗೆ ಅತಿ ಹೆಚ್ಚು ಅನುದಾನವನ್ನು ನೀಡಿದೆ. ಕ್ಷೇತ್ರದಲ್ಲಿ ಲೋಕೋಪಯೋಗಿ ರಸ್ತೆಗಳ ಕಾಮಗಾರಿ ಪೂರ್ಣಗೊಂಡಿದೆ ಹಾಗೂ ಮೂಲಭೂತ ಸೌಕರ್ಯವನ್ನು ಜನತೆಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದೇನೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಶಿಸ್ತುಬದ್ದವಾಗಿ, ಅತಿ ಹೆಚ್ಚು ದಿನ ಕರ್ತವ್ಯ ನಿರ್ವಹಿಸಿದ, ಅಪರಾಧ ರಹಿತ ಮತ್ತು ಅಪಘಾತ ರಹಿತ ಕಾರ್ಯನಿರ್ವಹಿಸಿದ ಜಿಲ್ಲೆಯ ಸಾರಿಗೆ ಸಂಸ್ಥೆಯ 31 ಚಾಲಕರನ್ನು ಬೆಳ್ಳಿಪದಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು.

ವಿಧಾನಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಎನ್.ಅಪ್ಪಾಜಿಗೌಡ, ಜಿಪಂ ಸದಸ್ಯೆ ರೇಣುಕಾ ರಾಮಕೃಷ್ಣ, ಮದ್ದೂರು ತಾಲೂಕು ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮಿ ಜಯರಾಮು, ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X