ವೇಶ್ಯಾವಾಟಿಕೆ ದಂಧೆ: ಮೂವರ ಬಂಧನ

ಬೆಂಗಳೂರು, ಜ.22: ನಗರದ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಿ, ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ.
ಬಂಧಿತರನ್ನು ಬಂಗಾಳ ಮೂಲದ ಶಾಹಿದ್ ಶೇಖ್(29), ಭರತ್(32), ಸಲೀಂ ಶೇಖ್(25) ಎಂದು ಗುರುತಿಸಲಾಗಿದೆ. ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನು ಕರೆತಂದು, ಇಂಟರ್‌ನೆಟ್, ಮೊಬೈಲ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ.
ಬಂಧಿತರಿಂದ 3 ಮೊಬೈಲ್, 5 ಎಟಿಎಂ ಕಾರ್ಡ್, 2 ಸಾವಿರ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮೊಕದ್ದಮೆ ದಾಖಲಿಸಿಕೊಂಡಿರುವ ಸೋಲದೇವನಹಳ್ಳಿ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆರೋಪಿಗಳ ವಿರುದ್ಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





