ಮಧ್ಯಪ್ರದೇಶದ ರಾಜ್ಯಪಾಲೆಯಾಗಿ ಆನಂದಿಬೆನ್ ಪ್ರಮಾಣ ವಚನ ಸ್ವೀಕಾರ
ಭೋಪಾಲ್, ಜ.23: ಬಿಜೆಪಿಯ ಹಿರಿಯ ನಾಯಕಿ ಮತ್ತು ಗುಜರಾತ್ನ ಮಾಜಿ ಮುಖ್ಯಮಂತ್ರಿಯಾಗಿರುವ ಆನಂದಿಬೆನ್ ಪಟೇಲ್ ಅವರು ಮಧ್ಯಪ್ರದೇಶದ ನೂತನ ರಾಜ್ಯಪಾಲೆಯಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮಧ್ಯಪ್ರದೇಶ ಉಚ್ಚನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಹೇಮಂತ್ ಗುಪ್ತಾ ಅವರು ಆನಂದಿಬೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಲೋಕಸಭೆಯ ಸಭಾಪತಿ ಸುಮಿತ್ರಾ ಮಹಾಜನ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಅವರ ಸಂಪುಟ ಸಚಿವರು ಇತರ ಗಣ್ಯರೊಂದಿಗೆ ಸಮಾರಂಭದಲ್ಲಿ ಹಾಜರಿದ್ದರು. ಮಧ್ಯಪ್ರದೇಶ ರಾಜ್ಯಪಾಲರಾಗಿದ್ದ ರಾಮ್ನರೇಶ್ ಯಾದವ್ 2016ರ ಸೆಪ್ಟೆಂಬರ್ನಲ್ಲಿ ನಿವೃತ್ತರಾಗಿದ್ದರು ಮತ್ತು ಇಲ್ಲಿಯವರೆಗೆ ಗುಜರಾತ್ನ ರಾಜ್ಯಪಾಲರಾದ ಓಂ ಪ್ರಕಾಶ್ ಕೊಹ್ಲಿ ಅವರು ಇಲ್ಲಿ ಪ್ರಭಾರ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು.
Next Story