ಇಂಡೋನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿ
ಹೊಸದಿಲ್ಲಿ, ಜ.24: ಈ ಬಾರಿ ಸಭಾರತದ 68ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
1950, ಜ.26ರಂದು ಭಾರತದ ಮೊದಲ ಗಣರಾಜ್ಯೋತ್ಸವದಲ್ಲಿ ಇಂಡೋನೇಷ್ಯಾದ ಅಧ್ಯಕ್ಷ ಸುಕಾರ್ನೊ ಮುಖ್ಯ ಅತಿಥಿಯಾಗಿದ್ದರು. ಇದೀಗ 68ನೇ ಗಣರಾಜ್ಯೋತ್ಸವದಲ್ಲೋ ಮತ್ತೆ ಇಂಡೋನೇಷ್ಯಾದ ಅಧ್ಯಕ್ಷರು ಮುಖ್ಯ ಅತಿಥಿಯಾಗಿರುತ್ತಾರೆ.
ಗಣರಾಜ್ಯೋತ್ಸವ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸುವುದನ್ನು ತಪ್ಪಿಸಲು ರಾಜಧಾನಿ ದಿಲ್ಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪೊಲೀಸರು ಸೂಕ್ತ ಬಂದೋ ಬಸ್ತ್ ಮಾಡಿದ್ದಾರೆ. ಅಲ್ಲಲ್ಲಿ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ.
Next Story