ಹಿರಿಯ ಸಾಮಾಜಿಕ, ಧಾರ್ಮಿಕ ಮುಂದಾಳು ಹಾಜಿ ಹಮೀದ್ ಕಂದಕ್ ನಿಧನ

ಮಂಗಳೂರು, ಜ. 24: ಹಿರಿಯ ಸಾಮಾಜಿಕ, ಧಾರ್ಮಿಕ ಮುಂದಾಳು ಹಾಜಿ ಹಮೀದ್ ಕಂದಕ್ ಬುಧವಾರ ಸಂಜೆ ನಿಧನರಾಗಿದ್ದಾರೆ.
ಅವರಿಗೆ (68) ವರ್ಷ ವಯಸ್ಸಾಗಿತ್ತು.
ನಗರದ ವುಡ್ ಲ್ಯಾಂಡ್ ಹೊಟೇಲ್ ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಹಮೀದ್ ಕಂದಕ್ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಟ್ರಾವೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಹಾಜಿ ಹಮೀದ್ ಕಂದಕ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದರು. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳ ಹಾಗು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಸ್ಥಾಪನೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.
ಮೃತದೇಹದ ಅಂತಿಮ ದರ್ಶನಕ್ಕಾಗಿ ವೆಲೆನ್ಸಿಯಾದ ಅವರ ನಿವಾಸದಲ್ಲಿ ಇರಿಸಲಾಗಿದೆ. ಗುರುವಾರ ಸಂಜೆ ಅಸರ್ ನಮಾಝ್ ಬಳಿಕ ಉಳ್ಳಾಲ ಕೇಂದ್ರ ಜುಮಾ ಮಸೀದಿಯ ವಠಾರದಲ್ಲಿ ಅಂತ್ಯ ಸಂಸ್ಕಾರವು ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವುಡ್ ಲ್ಯಾಂಡ್ ಹೊಟೇಲ್ ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಹಾಜಿ ಹಮೀದ್ ಕಂದಕ್

ಕೊನೆಯ ಕಾರ್ಯಕ್ರಮದಲ್ಲಿ ಹಮೀದ್ ಕಂದಕ್







