Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಾದಾಯಿ ಸಮಸ್ಯೆ ಇತ್ಯರ್ಥಕ್ಕೆ ಪ್ರಧಾನಿ...

ಮಹಾದಾಯಿ ಸಮಸ್ಯೆ ಇತ್ಯರ್ಥಕ್ಕೆ ಪ್ರಧಾನಿ ಮಧ್ಯಪ್ರವೇಶ ಮಾಡಲೇಬೇಕು: ವಾಟಾಳ್ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ24 Jan 2018 7:13 PM IST
share
ಮಹಾದಾಯಿ ಸಮಸ್ಯೆ ಇತ್ಯರ್ಥಕ್ಕೆ ಪ್ರಧಾನಿ ಮಧ್ಯಪ್ರವೇಶ ಮಾಡಲೇಬೇಕು: ವಾಟಾಳ್ ನಾಗರಾಜ್

ಬೆಂಗಳೂರು, ಜ.24: ಮಹಾದಾಯಿ, ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಯಲಿದೆ ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಸ್ಪಷ್ಟಣೆ ನೀಡಿದ್ದಾರೆ.

ಬುಧವಾರ ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಸುಮಾರು 2 ಸಾವಿರಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು ಬಂದ್‌ಗೆ ಬೆಂಬಲ ನೀಡಿವೆ. ಆದುದರಿಂದ, ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದರು.

ಹಾಲು, ಔಷಧಿ ಮಳಿಗೆ, ಆಸ್ಪತ್ರೆಗಳು, ತರಕಾರಿ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ. ಮಹಾದಾಯಿ, ಕಳಸಾ ಬಂಡೂರಿ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶ ಮಾಡಲೇಬೇಕು ಎಂಬುದು ನಮ್ಮ ಬೇಡಿಕೆ. ಪ್ರಧಾನಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರೆ ಕರ್ನಾಟಕ ಬಂದ್ ಹಿಂಪಡೆಯಲು ಸಿದ್ಧವಿದ್ದೇವೆ ಎಂದು ಅವರು ಹೇಳಿದರು.

ಸಾರ್ವಜನಿಕರಿಗೆ ತೊಂದರೆ ಕೊಡುವ ಉದ್ದೇಶ ಇದರಲ್ಲಿ ಇಲ್ಲ. ಮಹಾತ್ಮ ಗಾಂಧಿಯವರ ಸತ್ಯಾಗ್ರಹದ ಮಾರ್ಗವನ್ನು ಮೂರು ವರ್ಷಗಳಿಂದ ಹುಬ್ಬಳ್ಳಿ, ನವಲಗುಂದ, ನರಗುಂದದಲ್ಲಿ ರೈತರು ಅನುಸರಿಸುತ್ತಿದ್ದಾರೆ. 900 ದಿನಗಳ ಕಾಲ ನಡೆದ ಸತ್ಯಾಗ್ರಹದ ನಡುವೆ ಪ್ರಧಾನಿ ಐದು ಬಾರಿ ಕರ್ನಾಟಕಕ್ಕೆ ಬಂದಿದ್ದಾರೆ. ಆದರೆ, ಒಮ್ಮೆಯೂ ಅವರ ಪಕ್ಷದ ಮುಖಂಡರು ಅವರ ಗಮನಕ್ಕೆ ಈ ವಿಚಾರವನ್ನು ತರಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದೊಂದು ಗಂಭೀರವಾದ ಪರಿಸ್ಥಿತಿ, ತಾವು ಮಾಡಿದ ತಪ್ಪು ಮುಚ್ಚಿಕೊಳ್ಳಲು ನಮ್ಮ ಹೋರಾಟವನ್ನು ಟೀಕಿಸಲಾಗುತ್ತಿದೆ. ಇದನ್ನು ರಾಜಕೀಯ ಪ್ರೇರಿತ ಎಂದು ಬಿಂಬಿಸುವ ಮೂಲಕ ಅಪಹಾಸ್ಯ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಪ್ರಧಾನಿ ಮಧ್ಯಪ್ರವೇಶಕ್ಕೆ ಒತ್ತಾಯಿಸಿ ಕರೆ ನೀಡಿರುವ ಬಂದ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.

ನಾಳೆ ಬೆಳಗ್ಗೆ 10 ಗಂಟೆಗೆ ಟೌನ್‌ಹಾಲ್ ಮುಂಭಾಗ ನೂರಾರು ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೃಹತ್ ರ್ಯಾಲಿ ನಡೆಸಲಿದ್ದಾರೆ. ಉತ್ತರ ಕರ್ನಾಟಕದಲ್ಲೂ ರೈತ ಸಂಘಟನೆಗಳು ತಮ್ಮ ಹೋರಾಟವನ್ನು ಮುಂದುವರೆಸಲಿವೆ. ಸಮಸ್ತ ಕನ್ನಡಿಗರ ಹೋರಾಟ ಇದಾಗಿದ್ದು, ಎಲ್ಲರೂ ಬೆಂಬಲ ನೀಡಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.

ಗೋವಾ ಸರಕಾರವು ಮಹಾದಾಯಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ನಮ್ಮ ಪಾಲಿನ ನೀರು ನಮಗೆ ನೀಡಲು ಮೀನಾಮೇಷ ಎಣಿಸುತ್ತಿದೆ. ಆದರೂ, ನಮ್ಮ ಸಂಸದರು ತಮ್ಮ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಸಂಸದರು ಒಗ್ಗಟ್ಟಾಗುವ ರೀತಿಯಲ್ಲಿ ನಮ್ಮ ರಾಜ್ಯದಲ್ಲಿ ಆಗುತ್ತಿಲ್ಲ. ಎಲ್ಲರಿಗೂ ಬುದ್ಧಿ ಕಲಿಸಲು ನಾವು ಒಂದಾಗಿ ಹೋರಾಟ ಮಾಡಬೇಕು ಎಂದು ಅವರು ಹೇಳಿದರು.

ಆಡಳಿತಾರೂಢ ಕಾಂಗ್ರೆಸ್ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದ್ದು, ಬಿಜೆಪಿ ಮಾತ್ರ ವಿರೋಧ ವ್ಯಕ್ತಪಡಿಸಿದೆ. ಇನ್ನು ಜೆಡಿಎಸ್ ತಟಸ್ಥ ನೀತಿ ಅನುಸರಿಸಲು ತೀರ್ಮಾನಿಸಿದೆ. ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸರಕಾರಿ ಶಾಲಾ ಕಾಲೇಜುಗಳಿಗೆ ಪರಿಸ್ಥಿತಿಗನುಗುಣವಾಗಿ ತೀರ್ಮಾನ ಕೈಗೊಳ್ಳುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಂಗಳೂರು ವಿವಿಯ ಬಿಎ, ಬಿಎಸ್ಸಿ, ಬಿಕಾಂ ಮತ್ತು ಬಿಬಿಎಂ ಪರೀಕ್ಷೆಗಳನ್ನು ವುುಂದೂಡಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಆಟೋ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ, ಪ್ರವೀಣ್ ಶೆಟ್ಟಿ ಬಣ, ಕನ್ನಡ ಸೇನೆ, ಕಸ್ತೂರಿ ಕನ್ನಡ ಸಂಘ, ಎಪಿಎಂಸಿ ನೌಕರರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ, ಹಸಿರುಸೇನೆ , ಒಕ್ಕಲಿಗರ ಸಂಘ, ಕರ್ನಾಟಕ ನೌಕರರ ಸಂಘ, ಲಾರಿ ಮಾಲೀಕರ ಸಂಘ, ಕಸಾಪ, ಕನ್ನಡ ಕ್ರಿಯಾಸಮಿತಿ, ಹಮಾಲಿಗಳ ಸಂಘ, ರಾಜ್‌ಕುಮಾರ್ ಅಭಿಮಾನಿಗಳ ಸಂಘ ಮತ್ತಿತರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣವು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ರೈಲು ತಡೆ ಚಳವಳಿ ನಡೆಸಲು ನಿರ್ಧರಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, 15 ಸಾವಿರ ಪೊಲೀಸರನ್ನು ಹಾಗೂ 50ಕ್ಕೂ ಹೆಚ್ಚು ಕೆಎಸ್‌ಆರ್‌ಪಿ ತುಕಡಿಗಳನ್ನು ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ರೌಡಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಬಿಜೆಪಿ ಆರೋಪ ನಿರಾಧಾರ
ಬಿಜೆಪಿ ನಾಯಕರ ವಾದ ಒಪ್ಪುವಂತದ್ದಲ್ಲ. ಯಾವುದೇ ಕನ್ನಡಪರ ಸಂಘಟನೆಗಳು ಸರಕಾರದ ಕೈಗೊಂಬೆಗಳಾಗಿ ಕೆಲಸ ಮಾಡುವುದಿಲ್ಲ. ಒಂದು ವೇಳೆ ಅಂತಹ ಯಾವುದಾದರೂ ಸಂಘಟನೆಗಳು ಕೈಗೊಂಬೆಗಳಾದರೆ, ಅವು ಸಾರ್ವಜನಿಕ ಜೀವನದಲ್ಲಿ ಉಳಿಯಲು ಸಾಧ್ಯವಿಲ್ಲ. ರಾಷ್ಟ್ರೀಯ ಪಕ್ಷಗಳ ಮುಖಂಡರು ಮಾಡಿರುವ ಅಪರಾಧ, ತಪ್ಪಿಗೆ ಕನ್ನಡ ಪರ ಸಂಘಟನೆಗಳನ್ನು ದೂರುವುದು ಸರಿಯಲ್ಲ.
-ಟಿ.ಎ.ನಾರಾಯಣಗೌಡ, ಕರವೇ ರಾಜ್ಯಾಧ್ಯಕ್ಷ

ಕರ್ನಾಟಕ ಬಂದ್‌ಗೆ ನೈತಿಕವಾಗಿ ನಮ್ಮ ಬೆಂಬಲವಿದೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಬಿಎಂಟಿಸಿ ಬಸ್ಸುಗಳು ಎಂದಿನಂತೆ ಸಂಚರಿಸಲಿವೆ. ಆದರೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಬೆಳವಣಿಗೆಗಳು ನಡೆದರೆ, ಅನಿವಾರ್ಯವಾಗಿ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಬೇಕಾಗುತ್ತದೆ.
-ನಾಗರಾಜ್‌ಯಾದವ್, ಬಿಎಂಟಿಸಿ ಅಧ್ಯಕ್ಷ

ಮದ್ಯ ಮಾರಾಟ, ಸಾಗಾಣಿಕೆ ನಿಷೇಧ
ಮಹಾದಾಯಿ, ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ಕೇಂದ್ರ ಸಮಿತಿಯು ಜ.25ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಆ ಹಿನ್ನೆಲೆಯಲ್ಲಿ ನವಲಗುಂದ ಹಾಗೂ ಅಣ್ಣಿಗೇರಿ ಠಾಣಾ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನವಲಗುಂದ ತಾಲ್ಲೂಕಿನಾದ್ಯಂತ ಜ.24 ರಂದು ಮಧ್ಯರಾತ್ರಿ 11:59 ಗಂಟೆಯಿಂದ ಜ.25ರ ಮಧ್ಯರಾತ್ರಿ 11:59 ಗಂಟೆಯವರೆಗೆ ಮದ್ಯಪಾನ, ಮದ್ಯಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X