Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆಯಲ್ಲಿ 49,618 ಮನೆಗೆ ಉಚಿತ...

ದ.ಕ.ಜಿಲ್ಲೆಯಲ್ಲಿ 49,618 ಮನೆಗೆ ಉಚಿತ ಗ್ಯಾಸ್ ಸಂಪರ್ಕ

ಮುಖ್ಯಮಂತ್ರಿ ಅನಿಲ ಭಾಗ್ಯ

ವಾರ್ತಾಭಾರತಿವಾರ್ತಾಭಾರತಿ24 Jan 2018 7:46 PM IST
share

ಮಂಗಳೂರು, ಜ.24: ಮುಖ್ಯಮಂತ್ರಿಯ ಅನಿಲಭಾಗ್ಯ ಯೋಜನೆಯಡಿ ದ.ಕ. ಜಿಲ್ಲೆಯಲ್ಲಿ ಗ್ಯಾಸ್ ಸಂಪರ್ಕ ಇಲ್ಲದಿರುವ 49,618 ಫಲಾನುಭವಿಗಳಿಗೆ ಉಚಿತವಾಗಿ ಸಂಪರ್ಕ ನೀಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ಅನುಷ್ಠಾನ ಕುರಿತು ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಗ್ಯಾಸ್ ಸಂಪರ್ಕ ಪಡೆದಿರುವ ಮನೆಗಳನ್ನು ಹೊರತುಪಡಿಸಿ ಇನ್ನೂ 49,618 ಮನೆಗಳಿಗೆ ಗ್ಯಾಸ್ ಸಂಪರ್ಕ ಪಡೆಯಲು ಬಾಕಿ ಇದೆ. ಈಗಾಗಲೇ ಸಮೀಕ್ಷೆ ನಡೆಸಿ ನಿಖರ ಮಾಹಿತಿ ಪಡೆಯಲಾಗಿದೆ. ಜಿಲ್ಲೆಯ ಎಲ್ಲ 8 ವಿಧಾನಸಭಾ ಕ್ಷೇತ್ರದ 320 ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ ಈ ಫಲಾನುಭವಿಗಳಿದ್ದು ಮೊದಲ ಹಂತದಲ್ಲಿ 15,858 ಫಲಾನುಭವಿಗಳಿಗೆ ಶೀಘ್ರ ಗ್ಯಾಸ್ ಸಂಪರ್ಕ ಒದಗಿಸಲಾಗುವುದು ಎಂದು ಸಚಿವ ರಮಾನಾಥ ರೈ ಹೇಳಿದರು.

ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಲ್ಲಿ ಗ್ಯಾಸ್ ಸ್ಟವ್ ಕೂಡ ಉಚಿತವಾಗಿ ನೀಡಲಾಗುವುದು. ಸಿಲಿಂಡರ್ ಭದ್ರತಾ ಠೇವಣಿಯು 1450 ರೂ., ರೆಗ್ಯುಲೇಟರ್ 150 ರೂ., ಸುರಕ್ಷಾ ಹೋಸ್ 190 ರೂ., ಪುಸ್ತಕ 50 ರೂ., ಜೋಡಣಾ ವೆಚ್ಚ 100 ರೂ., ಎರಡು ಬರ್ನರ್ ಗ್ಯಾಸ್‌ಸ್ಟವ್ 1,000 ರೂ. ಹಾಗೂ ಎರಡು ಭರ್ತಿಗೊಂಡ ಗ್ಯಾಸ್ ಸಿಲಿಂಡರ್ 1,000 ರೂ. ಸೇರಿದಂತೆ ಪ್ರತೀ ಫಲಾನುಭವಿಗೆ ರಾಜ್ಯ ಸರಕಾರ 4,040 ರೂ.ವೆಚ್ಚ ಮಾಡಲಿದೆ.

ಫಲಾನುಭವಿಗಳಿಗೆ ಇದು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಅರಣ್ಯ ಇಲಾಖೆ, ಆಹಾರ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವ ರೈ ಹೇಳಿದರು.

ಮುಖ್ಯಮಂತ್ರಿ ಅನಿಲಭಾಗ್ಯ ಅನುಷ್ಠಾನಕ್ಕೆ 41.12 ಲಕ್ಷ ರೂ.ಬಿಡುಗಡೆಯಾಗಿದೆ. ಮಾರ್ಚ್ ಅಂತ್ಯದೊಳಗೆ ವೆಚ್ಚ ಮಾಡಲಾಗುವುದು. ಅರ್ಹ ಫಲಾನುಭಗಳು ಯೋಜನೆಯಲ್ಲಿ ವಂಚಿತರಾಗದಂತೆ ಆಹಾರ ಇಲಾಖೆ ಗಮನಹರಿಸಬೇಕು. ಇನ್ನೊಮ್ಮೆ ಫಲಾನುಭವಿಗಳ ಸಮರ್ಪಕ ಮಾಹಿತಿ ಪಡೆಯಬೇಕು. ಈಗಾಗಲೇ ಬೇರೆ ಇಲಾಖೆಯಿಂದ ಉಚಿತ ಗ್ಯಾಸ್ ಸಂಪರ್ಕ ಪಡೆದಿದ್ದರೆ ಅವರಿಗೆ ಈ ಯೋಜನೆಯಲ್ಲಿ ಪುನರಾವರ್ತನೆಯಾಗದಂತೆ ಗಮನ ಹರಿಸಲು ಸಚಿವರು ಸೂಚಿಸಿದರಲ್ಲದೆ, ಅರ್ಹ ಫಲಾನುಭವಿಗಳ ಹೆಸರು ಕಣ್ತಪ್ಪಿನಿಂದ ಕೈಬಿಟ್ಟು ಹೋಗಿದ್ದರೆ ಮುಂದಿನ ಹಂತದಲ್ಲಿ ಅವರನ್ನು ಸೇರಿಸಿಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಸಿಕುಮಾರ್ ಸೆಂಥಿಲ್, ಆಹಾರ ಇಲಾಖೆಯ ಉಪನಿರ್ದೇಶಕ ಜಯಪ್ಪ, ತೈಲ ಕಂಪೆನಿಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X