ಜ.25: ದ.ಕ. ಜಿಲ್ಲೆಯಲ್ಲಿ ಬಸ್ ಬಂದ್ ಇಲ್ಲ

ಮಂಗಳೂರು, ಜ.24: ಕಳಸಾ ಬಂಡೂರಿ ಯೋಜನೆಗಾಗಿ ಕನ್ನಡ ಪರ ಸಂಘಟನೆಗಳು ಜ. 25ರಂದು ನೀಡಿದ ಕರ್ನಾಟಕ ಬಂದ್ ಕರೆಗೆ ದ.ಕ. ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ಮಧ್ಯೆ ಕರ್ನಾಟಕ ರಕ್ಷಣಾ ವೇದಿಕೆಯು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲು ತಡೆ ನಡೆಸುವುದಾಗಿ ತಿಳಿಸಿದೆ.
ಕನ್ನಡ ಪರ ಸಂಘಟನೆಗಳ ಹೋರಾಟಕ್ಕೆ ನೈತಿಕ ಬೆಂಬಲವಿದೆ. ಆದರೆ, ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಸ್ ಬಂದ್ ಇಲ್ಲ. ಎಂದಿನಂತೆ ಬಸ್‌ಗಳು ಓಡಾಟ ನಡೆಸಲಿದೆ ಎಂದು ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ‘ವಾರ್ತಾಭಾರತಿ’ಗೆ ತಿಳಿಸಿದ್ದಾರೆ.
Next Story





