ಪುತ್ತೂರು: ಯುವತಿ ಆತ್ಮಹತ್ಯೆ
ಪುತ್ತೂರು, ಜ. 24: ಟೈಲರಿಂಗ್ ವೃತ್ತಿ ನಡೆಸುತ್ತಿದ್ದ ಅವಿವಾಹಿತ ಯುವತಿಯೊಬ್ಬರು ತನ್ನ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುಣ್ಚತ್ತಾರು ಗ್ರಾಮದ ನೋಲ್ಮೆ ಎಂಬಲ್ಲಿ ಬುಧವಾರ ನಡೆದಿದೆ.
ಪುಣ್ಚತ್ತಾರು ಗ್ರಾಮದ ನೋಲ್ಮೆ ಕುಶಾಲಪ್ಪ ಗೌಡ ಎಂಬವರ ಪುತ್ರಿ ಪವಿತ್ರ (19) ಆತ್ಮಹತ್ಯೆ ಮಾಡಿಕೊಂಡವರು. ಪವಿತ್ರಾ ಅವರು ಕಳೆದ ಕೆಲ ಸಮಯ ದಿಂದೀಚೆಗೆ ಪುಣ್ಚತ್ತಾರು ಎಂಬಲ್ಲಿ ಟೈಲರಿಂಗ್ ವೃತ್ತಿ ನಡೆಸುತ್ತಿದ್ದರು. ಮನೆಯ ಕೊಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ಕೃತ್ಯ ನಡೆಸಿಕೊಂಡಿದ್ದಾರೆ. ಸ್ವಸಹಾಯ ಸಂಘದ ಸಭೆಗೆ ತೆರಳಿದ್ದ ತಾಯಿ ಮನೆಗೆ ಬಂದ ಬಳಿಕವಷ್ಟೇ ಈ ಘಟನೆ ಬೆಳಕಿಗೆ ಬಂದಿದೆ. ಮೃತರು ತಂದೆ, ತಾಯಿ ಮತ್ತು ಮೂವರು ಸಹೋದರರನ್ನು ಅಗಲಿದ್ದಾರೆ. ಕುಶಾಲಪ್ಪ ಗೌಡ ಅವರು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





