Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ಬಂದ್: ಚಿಕ್ಕಮಗಳೂರಿನಲ್ಲಿ...

ಕರ್ನಾಟಕ ಬಂದ್: ಚಿಕ್ಕಮಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ25 Jan 2018 4:59 PM IST
share
ಕರ್ನಾಟಕ ಬಂದ್: ಚಿಕ್ಕಮಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ

ಚಿಕ್ಕಮಗಳೂರು, ಜ.25: ಮಹದಾಯಿ-ಕಳಸಾಬಂಡೂರಿ ಯೋಜನೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ನೀಡಿರುವ ರಾಜ್ಯ ಬಂದ್ ಕರೆಗೆ ಚಿಕ್ಕಮಗಳೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೆಎಸ್‍ಆರ್‍ಟಿಸಿ ಬಸ್, ಖಾಸಗಿ ಬಸ್ ಸೇರಿದಂತೆ ಆಟೋ ಸಂಚಾರಗಳು ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಕಾಣಿಸದ ಹಿನ್ನೆಲೆಯಲ್ಲಿ, ಹಲವು ಪ್ರಯಾಣಿಕರು ಪರದಾಡಬೇಕಾಯಿತು. ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು, ಧರ್ಮಸ್ಥಳ, ಮಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರು ಬಸ್ ಇಲ್ಲದೇ ಪರದಾಟ ನಡೆಸಬೇಕಾಯಿತು. 

ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಚಲಿಸುತ್ತಿರುವ ವಾಹನಗಳನ್ನು ತಡೆದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಕನ್ನಡ ಪರ ಸಂಘಟನೆಗಳಿಂದ ವಿಭಿನ್ನವಾಗಿ ಉರುಳು ಸೇವೆ ಹಾಗೂ ತಲೆ ಬೋಳಿಸಿಕೊಂಡು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು. ಕೆಲವು ಕನ್ನಡಪರ ಕಾರ್ಯಕರ್ತರು ಶ್ರೀ ಗಣಪತಿ ದೇವಾಲಯದಿಂದ ಹನುಮಂತಪ್ಪ ವೃತ್ತದವರೆಗೆ ಉರುಳು ಸೇವೆ ಮಾಡಿದರು. ಇಬ್ಬರು ತಲೆ ಬೋಳಿಸಿಕೊಂಡು, ಖಾಲಿ ಕೊಡ ಪ್ರದರ್ಶಿಸಿ ಗಮನ ಸೆಳೆದರು.

ಮಳಲೂರು ಗ್ರಾಮದ ಪ್ರಗತಿಪರ ರೈತ ಚಂದ್ರೇಗೌಡ ಎಂಬವರು ನಗರದ ಹನುಮಂತಪ್ಪ ವೃತ್ತದಲ್ಲಿ ಏಕಾಂಗಿಯಾಗಿ ಸೈಕಲ್‍ನಲ್ಲಿ ಹಸಿರು ಬಾವುಟ ಹಾಗೂ ಕ್ಯಾರಿಯರ್‍ಗೆ ಹಾಲು ಕ್ಯಾನ್ ಕಟ್ಟಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಶಾಲೆ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಆದೇಶ ಹೊರಡಿಸಿದ್ದರು. ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X