ಮಹಿಳೆಯ ಜೊತೆ ಅಸಭ್ಯ ವರ್ತನೆ: ಇಬ್ಬರ ಬಂಧನ
ಬಂಟ್ವಾಳ, ಜ. 25: ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಗುರುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಒಕ್ಕೆತ್ತೂರು ನಿವಾಸಿ ಸುಲೈಮಾನ್ ಹಾಗೂ ಮಂಗಳಪದವು ನಿವಾಸಿ ರಿಯಾಝ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ವಿಟ್ಲ ಕಸಬಾ ಗ್ರಾಮದ ಮುರಳೀಧರ ಎಂಬವರಿಗೆ ಸೇರಿದ ವಿಟ್ಲ-ಮಂಗಳೂರು ರಸ್ತೆಯಲ್ಲಿರುವ ಜೆರಾಕ್ಸ್ ಅಂಗಡಿಯಲ್ಲಿ ಮುರಳೀಧರ ಅವರ ಪತ್ನಿ ಇರುವ ವೇಳೆ ತೆರಳಿದ ಆರೋಪಿಗಳಿಬ್ಬರು ಜೆರಾಕ್ಸ್ ಬೇಕೆಂದು ಕೇಳಿ, ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪ್ರಶ್ನಿಸಿದ್ದ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿ, ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ಮುರಳೀಧರ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
Next Story





