ಜ.27: ಉಡುಪಿ ಬ್ಲಾಕ್ ಕಾಂಗ್ರೆಸ್ ಸಭೆ
ಉಡುಪಿ, ಜ.25: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆ ಜ.27ರ ಅಪರಾಹ್ನ 3:30ಕ್ಕೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿ ಸಲಿದ್ದಾರೆ. ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಜನಾರ್ಧನ ಭಂಡಾರ್ ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





