Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೀಡಿ ಕಾರ್ಮಿಕರ ವಿರೋಧ ಕಟ್ಟಿಕೊಳ್ಳುವುದು...

ಬೀಡಿ ಕಾರ್ಮಿಕರ ವಿರೋಧ ಕಟ್ಟಿಕೊಳ್ಳುವುದು ಬೇಡ: ಮುಹಮ್ಮದ್ ರಫಿ

ಜ.30:ಬೀಡಿ ಕಾರ್ಮಿಕರ ಮತ್ತು ಕಂಟ್ರಾಕ್ಟ್‌ದಾರರ ಜಂಟಿ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ25 Jan 2018 10:58 PM IST
share

ಮಂಗಳೂರು, ಜ.25: ಕೇಂದ್ರ ಸರಕಾರವು 2020ರೊಳಗೆ ಧೂಮಪಾನ ಮುಕ್ತ ರಾಷ್ಟ್ರವಾಗಿಸುವ ಪಣ ತೊಟ್ಟಿವೆ. ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿದೆ. ಆದರೆ ಇದರಿಂದ ದೇಶದ ಸುಮಾರು 2 ಕೋಟಿ ಬೀಡಿ ಕಾರ್ಮಿಕರು ಅತಂತ್ರರಾಗುತ್ತಿದ್ದಾರೆ. ಅವರನ್ನು ಬೀದಿ ಪಾಲು ಮಾಡುವ ಬದಲು 2030 ಅಥವಾ 2040ರವರೆಗೆ ಕಾಲಾವಕಾಶ ಕೊಟ್ಟರೆ ಬೀಡಿ ಉದ್ಯಮವು ಅದಾಗಿಯೇ ನಾಶ ಹೊಂದಲಿದೆ. ಅದಕ್ಕಿಂತ ಮುನ್ನ ಬೀಡಿ ಉದ್ಯಮ ಮುಚ್ಚಿಸಿ ಬೀಡಿ ಕಾರ್ಮಿಕರ ವಿರೋಧ ಕಟ್ಟಿಕೊಳ್ಳುವುದು ಬೇಡ ಎಂದು ಸೌತ್ ಕೆನರಾ ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟ್‌ದಾರರ ಯೂನಿಯನ್‌ನ ಕಾರ್ಯಾಧ್ಯಕ್ಷ ಮುಹಮ್ಮದ್ ರಫಿ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಬೀಡಿ ಉದ್ಯಮ ನಾಶದ ಅಂಚಿನಲ್ಲಿವೆ. ಅದಕ್ಕೆ ಪರ್ಯಾಯ ಉದ್ಯಮ ಸ್ಥಾಪಿಸುವುದು ಅಷ್ಟು ಸುಲಭದ ಕೆಲಸವೂಲ್ಲ. ಯುವ ಜನಾಂಗ ಧೂಮಪಾನದಿಂದ ದೂರ ಸರಿಯುತ್ತಿದೆ. ಗಾಂಜಾ, ಡ್ರಗ್ಸ್ ಜಾಲಕ್ಕೆ ಬಲಿಯಾಗುತ್ತಿದೆ. ಈ ಮಧ್ಯೆ ಸರಕಾರ ಕೊಟ್ಪಾ, ಜಿಎಸ್‌ಟಿ ಜಾರಿಗೊಳಿಸುವ ಮೂಲಕ ಬೀಡಿ ಉದ್ಯಮಕ್ಕೆ ಹೊಡೆತ ನೀಡಿದೆ. ನಿರುದ್ಯೋಗ ಭೀತಿ ಕಾಡಿದೆ. ಪೊಲೀಸ್ ಸಹಿತ ವಿವಿಧ ಇಲಾಖೆಗಳು ಅಂಗಡಿಗಳಲ್ಲಿ ಸಾರ್ವಜನಿಕವಾಗಿ ಬೀಡಿ ಮಾರಾಟ ಮಾಡಲಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಧೂಮಪಾನಿಗಳು ಕೂಡ ಕದ್ದುಮುಚ್ಚಿ ಬೀಡಿ ಸೇದುವಂತಹ ವಾತಾವರಣ ಸೃಷ್ಟಿಯಾಗಿದೆ. ಇದರಿಂದ ಭಾರೀ ಪರಿಣಾಮ ಎದುರಿಸಬೇಕಾದೀತು ಎಂದು ಮುಹಮ್ಮದ್ ರಫಿ ಹೇಳಿದರು.

ಜಿಲ್ಲೆಯಲ್ಲಿ ಸುಮಾರು 10 ಬೀಡಿ ಉದ್ಯಮ ಕಂಪೆನಿಗಳಿವೆ, 1 ಸಾವಿರಕ್ಕೂ ಅಧಿಕ ಗುತ್ತಿಗೆದಾರರಿದ್ದಾರೆ, 2.50ಲಕ್ಷಕ್ಕೂ ಅಧಿಕ ಬೀಡಿ ಕಾರ್ಮಿಕರಿದ್ದಾರೆ. ಬೀಡಿ ಉದ್ಯಮವನ್ನು ಜಿಎಸ್‌ಡಿ ಹೊಡೆತ, ಕೊಟ್ಪಾ ಕಾಯ್ದೆಯಿಂದ ಪಾರು ಮಾಡದಿದ್ದರೆ ಭವಿಷ್ಯದಲ್ಲಿ ಈ ಎಲ್ಲ ಕಾರ್ಮಿಕರ ಬದುಕು ಶೋಚನೀಯವಾಗಲಿದೆ. ಹಾಗಾಗಿ ಕೇಂದ್ರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳು, ರಾಜಕಾರಣಿಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದು ಮುಹಮ್ಮದ್ ರಫಿ ಹೇಳಿದರು.

ಜ.30ರಂದು ಸಮಾವೇಶ: ಸೌತ್ ಕೆನರಾ ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟ್‌ದಾರರ ಯೂನಿಯನ್‌ನ ಸಮಾವೇಶವು ಜ.30ರಂದು ನಗರದ ಪುರಭವನದಲ್ಲಿ ನಡೆಯಲಿದೆ. ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಆಹಾರ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ವಿಪಕ್ಷ ನಾಯಕ ಐವನ್ ಡಿಸೋಜ, ಶಾಸಕ ಬಿ.ಎ.ಮೊಯ್ದಿನ್ ಬಾವಾ, ಮೇಯರ್ ಕವಿತಾ ಸನಿಲ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಯೂನಿಯನ್‌ನ ಗೌರವಾಧ್ಯಕ್ಷ ಎಂ. ಸುರೇಶ್ಚಂದ್ರ ಶೆಟ್ಟಿ, ಅಧ್ಯಕ್ಷ ಹರೀಶ್ ಕೆ.ಎಸ್., ಪ್ರಧಾನ ಕಾರ್ಯದರ್ಶಿ ಕಿರಣ್ ಸುವರ್ಣ, ಸಲಹೆಗಾರ ದೇಜಪ್ಪ ಪೂಜಾರಿ, ಪ್ರಧಾನ ಸಂಘಟನಾ ಕಾರ್ಯದರ್ಶಿ ಅಸ್ಗರ್ ಅಲಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ ಕೆ.ಎಲ್. ತಲಪಾಡಿ, ಯು.ಎಚ್.ಅಬ್ದುಲ್ಲಾ ಉಳ್ಳಾಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X