ಗಣರಾಜ್ಯೋತ್ಸವ ಆಚರಣೆ ವೇಳೆ ಗುಂಡು ಹಾರಿಸಿಕೊಂಡು ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಲುಧಿಯಾನ, ಜ.26: ಸರಕಾರಿ ಹಿರಿಯ ಮಾಧ್ಯಮ ಶಾಲೆಯೊಂದರಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ವೇಳೆ ಹೆಡ್ ಕಾನ್ ಸ್ಟೇಬಲ್ ಒಬ್ಬರು ಸರ್ವಿಸ್ ರೈಫಲ್ ನಿಂದ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಲುಧಿಯಾನದ ಜಗ್ರಾಂವ್ ನಲ್ಲಿ ನಡೆದಿದೆ.
ಪೊಲೀಸ್ ಅಧಿಕಾರಿಯೊಬ್ಬರ ಚಾಲಕ ಹಾಗು ಗನ್ ಮ್ಯಾನ್ ಆಗಿದ್ದ ಮಂಜಿತ್ ರಾಮ್ (44) ತನ್ನ ತಲೆಗೆ ಗುಂಡಿಕ್ಕುವ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಾರ್ಯಕ್ರಮ ನಡೆಯುವಾಗ ಮಂಜಿತ್ ಪೊಲೀಸ್ ವಾಹನದಲ್ಲಿ ಕುಳಿತಿದ್ದರು. ಧ್ವಜಾರೋಹಣ ನಡೆಯುತ್ತಿರುವಂತೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
“ವೈಯಕ್ತಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರು ಈ ಕೆಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಕುಟುಂಬದೊಳಗೆ ನಡೆಯುತ್ತಿದ್ದ ಭೂವಿವಾದಕ್ಕೆ ಸಂಬಂಧಿಸಿ ಅವರು ಖಿನ್ನತೆಗೆ ಒಳಗಾಗಿದ್ದರು. ಹೊಸ ಮನೆ ನಿರ್ಮಾಣಕ್ಕಾಗಿ ಸಾಲವನ್ನೂ ಪಡೆದಿದ್ದರು. ಆದರೆ ಸಾಲ ಮರುಪಾವತಿಸಲು ಅವರಿಗೆ ಕಷ್ಟವಾಗುತ್ತಿತ್ತು. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿ ಸುರ್ಜಿತ್ ಸಿಂಗ್ ತಿಳಿಸಿದ್ದಾರೆ.
Next Story