Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭ್ರಾತೃತ್ವ ಭಾವನೆ ಮೂಡಲು ಧೃಡ ಸಂಕಲ್ಪ...

ಭ್ರಾತೃತ್ವ ಭಾವನೆ ಮೂಡಲು ಧೃಡ ಸಂಕಲ್ಪ ಮಾಡಬೇಕು: ಡಾ.ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ26 Jan 2018 10:33 PM IST
share
ಭ್ರಾತೃತ್ವ ಭಾವನೆ ಮೂಡಲು ಧೃಡ ಸಂಕಲ್ಪ ಮಾಡಬೇಕು: ಡಾ.ಎಚ್.ಸಿ.ಮಹದೇವಪ್ಪ

ಮೈಸೂರು,ಜ.26:  ಭಾರತದ ಪ್ರಜೆಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ವ್ಯವಸ್ಥೆಗೊಳಿಸಲು, ಮತ್ತು ಅದರ ಎಲ್ಲ ಪೌರರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆ ಎಲ್ಲರಿಗೂ ದೊರೆಯುವಂತೆ ಮಾಡುವುದಕ್ಕೆ ವ್ಯಕ್ತಿ ಗೌರವ, ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ರಕ್ಷಿಸಿ, ಭ್ರಾತೃ ಭಾವನೆಯನ್ನು ಎಲ್ಲರಿಗೂ ವೃದ್ಧಿಗೊಳಿಸುವುದಕ್ಕಾಗಿ ಧೃಡ ಸಂಕಲ್ಪ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಇಂದು ಬೆಳಿಗ್ಗೆ ನಗರದ ಬನ್ನಿಮಂಟಪದಲ್ಲಿರುವ ಕವಾಯಿತು ಮೈದಾನದಲ್ಲಿ 69ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತವು ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರ.ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪೈಕಿ ಮುಂಚೂಣಿಯಲ್ಲಿರುವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾಜನವಾಗಿದೆ.ನಮ್ಮ ರಾಷ್ಟ್ರವು ಗಣರಾಜ್ಯವಾಗಿ ಹೊಂದಿ ಇಂದಿಗೆ 68 ವರ್ಷವನ್ನು ಪೂರೈಸಿ, 69ನೇ ವರ್ಷಕ್ಕೆ ಕಾಲಿರಿಸಿದ್ದು, ತುಂಬಾ ಸಂಭ್ರಮದಿಂದ ಇಡೀ ದೇಶದ ಮೂಲೆ ಮೂಲೆಯಲ್ಲಿಯೂ ಆಚರಿಸಲಾಗುತ್ತಿದೆ. ಭಾರತದ ಸಂವಿಧಾನವು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ ಎಂದರು.

1946ನೇ ಡಿಸೆಂಬರ್ 9, 1949ನೇ ನವೆಂಬರ್ 26 ಮತ್ತು 1950ನೇ ಜನವರಿ 26 ಈ ಮೂರು ದಿನಗಳು ನವಭಾರತದ ಸಂವಿಧಾನದ ಚರಿತ್ರೆಯಲ್ಲಿ ಬಹು ಪ್ರಮುಖವಾದವುಗಳು. ಸಂವಿಧಾನದ ರಚನಾ ಸಭೆಯು ಹನ್ನೊಂದು ಅಧಿವೇಶನಗಳನ್ನು ಒಳಗೊಂಡಿತ್ತು. ಇದರಲ್ಲಿ ಮೊದಲ ಆರು ಅಧಿವೇಶನಗಳಲ್ಲಿ ಉದ್ದೇಶಗಳ ನಿರ್ಣಯಗಳನ್ನು ಅಂಗೀಕರಿಸಲು ಮತ್ತು ಮೂಲಭೂತ ಹಕ್ಕುಗಳು, ಒಕ್ಕೂಟ, ಪ್ರಾಂತೀಯ ಸಂವಿಧಾನ, ಅಲ್ಪಸಂಖ್ಯಾತರು, ಅನುಸೂಚಿತ ಪ್ರದೇಶಗಳು, ಅನುಸೂಚಿತ ಬುಡಕಟ್ಟುಗಳು ಇವುಗಳಿಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ವರದಿಗಳನ್ನು ಪರಿಶೀಲಿಸುವ ಕೆಲಸ ನಡೆಯಿತು. ಉಳಿದ ಅಧಿವೇಶನಗಳು ಸಂಪೂರ್ಣವಾಗಿ ಕರಡು ಸಂವಿಧಾನದ ಪರಿಶೀಲನಾ ಕಾರ್ಯಕ್ಕೆ ಮೀಸಲಾದವು. ಈ ಹನ್ನೊಂದು ಅಧಿವೇಶನಗಳು 165 ದಿನಗಳಲ್ಲಿ ನಡೆಯಿತು. ಅದರಲ್ಲಿ 114 ದಿನಗಳನ್ನು ಸಂವಿಧಾನದ ಕರಡನ್ನು ಪರಿಶೀಲಿಸಲು ತೆಗೆದುಕೊಳ್ಳಲಾಯಿತು ಎಂದರು.

ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು 1947ನೇ ಆಗಸ್ಟ್ 29 ರಂದು ಆಯ್ಕೆ ಮಾಡಲಾಯಿತು. 1947ನೇ ಆಗಸ್ಟ್ 30ರಿಂದ ಒಟ್ಟು 141 ದಿನಗಳ ಕಾಲ ಕರಡನ್ನು ಸಿದ್ಧಪಡಿಸಲು ತೆಗೆದುಕೊಳ್ಳಲಾಯಿತು. ಇದು ಅಂತಿಮವಾಗಿ ರೂಪುಗೊಳ್ಳುವ ಹೊತ್ತಿಗೆ 395 ವಿಧಿಗಳನ್ನು, 8 ಅನುಸೂಚಿಗಳನ್ನು ಸಿದ್ಧಪಡಿಸಲಾಯಿತು. ಇವುಗಳನ್ನು ತಿದ್ದುಪಡಿಗಾಗಿ ಸಲ್ಲಿಸಿ, ಸುಮಾರು 7635 ತಿದ್ದುಪಡಿಗಳನ್ನು ಪಟ್ಟಿ ಮಾಡಲಾಯಿತು. ಇವುಗಳ ಪೈಕಿ 2473 ತಿದ್ದುಪಡಿಗಳನ್ನು ಸದನದ ಮುಂದೆ ಚರ್ಚೆಗೆ ಒಪ್ಪಿಸಲಾಯಿತು. ಭಾರತ ಸಂವಿಧಾನವು ರಚಿತವಾಗಲು ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೇಳಿದ ಹಾಗೇ,2 ವರ್ಷ 11 ತಿಂಗಳು 17 ದಿನಗಳನ್ನು ತೆಗೆದುಕೊಂಡಿತು. ಅಮೇರಿಕಾದ ಸಂವಿಧಾನವು 4 ತಿಂಗಳೊಳಗಾಗಿ, ಕೆನಡಾ ಸಂವಿಧಾನವು 2 ವರ್ಷ 5 ತಿಂಗಳು, ಆಸ್ಟ್ರೇಲಿಯಾ ಸಂವಿಧಾನವು 9 ವರ್ಷಗಳು, ದಕ್ಷಿಣ ಆಫ್ರಿಕಾದ ಸಂವಿಧಾನವು 1 ವರ್ಷ ಅವಧಿಯನ್ನು ತನ್ನ ಸಂವಿಧಾನದ ರಚನೆಗಾಗಿ ತೆಗೆದುಕೊಂಡಿದ್ದವು ಎಂದು ತಿಳಿಸಿದರು.

ವಾಕ್ ಸ್ವಾತಂತ್ರದ ಹಕ್ಕಿಗೆ ಮಿತಿಯ ಸಮರ್ಥನೆಗಾಗಿ ಬಾಬಾಸಾಹೇಬ್ ಅವರು ತೀರ್ಪನ್ನು ಉಲ್ಲೇಖಿಸಿದ್ದಾರೆ. ಅದು ಬಹುಕಾಲದಿಂದ ಸ್ಥಾಪಿತವಾಗಿರುವ ಮೂಲತತ್ವ ಸಂವಿಧಾನವು ವಾಕ್ ಸ್ವಾತಂತ್ರ್ಯವನ್ನು, ಪತ್ರಿಕಾ ಸ್ವಾತಂತ್ರ್ಯವನ್ನು ನೀಡುತ್ತದೆ. ಆದರೆ ಅದು ಹೊಣೆಗಾರಿಕೆ ಇಲ್ಲದೆ ಮನಸ್ಸಿಗೆ ಬಂದಂತೆ ಮಾತನಾಡಲು ಅಥವಾ ಪ್ರಕಟಿಸಲು ನಿರಾಪೇಕ್ಷಿತವಾದ ಹಕ್ಕನ್ನು ನೀಡುವುದಿಲ್ಲ. ಭಾಷೆಯನ್ನು ಹೇಗೆ ಬೇಕಾದರೂ ಬಳಸಲು ಅನಿರ್ಬಂದಿತವಾದ ಕಡಿವಾಣವಿಲ್ಲದ ಪರವಾನಗಿ ಕೊಡುವುದಿಲ್ಲ. ಈ ಸ್ವಾತಂತ್ರ್ಯವನ್ನು ದುರುಪಯೋಗ ಪಡಿಸಿಕೊಳ್ಳುವವರಿಗೆ ದಂಡನೆಯನ್ನು ತಪ್ಪಿಸಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಬಾಬಾಸಾಹೇಬ್ ಅಂಬೇಡ್ಕರ್ ಅವರು ವಾಕ್ ಸ್ವಾತಂತ್ರ್ಯದ ಹಕ್ಕನ್ನು ವಿವೇಚನೆಯಿಂದ ಬಳಸುವ ಹಕ್ಕಾಗಿರುತ್ತದೆ ಎಂದಿದ್ದಾರೆ. ಇಂದು ಜವಾಬ್ದಾರಿ ಸ್ಥಾನದಲ್ಲಿರುವವರೆ ಕಟುಕು ಮತ್ತು ಕುಟುಕು ರಾಜಕಾರಣದ ಮಾತುಗಳನ್ನು ಆಡುತ್ತಿದ್ದಾರೆ. ಆದರೆ ಕಟ್ಟುವ ರಾಜಕಾರಣದ ಮಾತುಗಳು ಗಣರಾಜ್ಯದ ಮಾತುಗಳಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಮಾಂಡೋಗಳಿಂದ ವಿಐಪಿಗಳು ಹಾಗೂ ಸಾರ್ವಜನಿಕರನ್ನು ಉಗ್ರಗಾಮಿಗಳಿಂದ ರಕ್ಷಿಸುವ ಬಗ್ಗೆ ಅಣಕು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ನಂತರ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭದಲ್ಲಿ ಶ್ರೀ ಸುಮತಿನಾಥ್ ಜೈನ್ ಯುವಕ ಮಂಡನ್ ವತಿಯಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಲಘು ಉಪಹಾರವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಹಾಪೌರರಾದ ಭಾಗ್ಯವತಿ, ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕರುಗಳಾದ ವೆಂಕಟೇಶ್, ಎಂ.ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಹೆಚ್.ಎ. ವೆಂಕಟೇಶ್, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಜಿಲ್ಲಾಧಿಕಾರಿ ರಂದೀಪ್, ನಗರಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್ ಸೇರಿದಂತೆ ಇನ್ನಿತರ ಗಣ್ಯರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X