ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ಮಾಧ್ಯಮ ಅಕಾಡಮಿ ಪ್ರಶಸ್ತಿ ಪ್ರದಾನ

ಮಂಗಳೂರು, ಜ. 26: ಕರ್ನಾಟಕ ಮಾಧ್ಯಮ ಅಕಾಡಮಿಯ ವಾರ್ಷಿಕ ಪ್ರಶಸ್ತಿ ಸಮಾರಂಭ ಬೆಂಗಳೂರಿನ ವಸಂತ ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜರಗಿತು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅವರು ಪತ್ರಿಕೋದ್ಯಮದಲ್ಲಿ ಸಲ್ಲಿಸಿದ ಸೇವೆಗಾಗಿ ಮಾಧ್ಯಮ ಅಕಾಡಮಿ ಪ್ರಶಸ್ತಿಯನ್ನು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಸ್ವೀಕರಿಸಿದರು.
ಕರ್ನಾಟಕ ಮಾಧ್ಯಮ ಅಕಾಡಮಿ ಅಧ್ಯಕ್ಷ ಎಂ.ಸಿದ್ಧರಾಮ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ ಎಸ್.ಹರ್ಷ, ಸಾಹಿತಿ ಬರಗೂರು ರಾಮಚಂದ್ರಪ್ಪ, ಅಕಾಡಮಿ ಕಾರ್ಯದರ್ಶಿ ಎಸ್ ಶಂಕರಪ್ಪ, ಹಾಗೂ ನಿವೃತ ಅಧಿಕಾರಿ ರವೀಂದ್ರನಾಥ ಠಾಗೂರ್ ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಜಿಲ್ಲೆಯಿಂದ ಜಗನ್ನಾಥ ಶೆಟ್ಟಿ ಬಾಳ, ಸ್ಟಾನ್ಲಿ ಪಿಂಟೋ , ಡಾ.ಯು.ಪಿ. ಶಿವಾನಂದ ಸೇರಿದಂತೆ ರಾಜ್ಯದಿಂದ ಒಟ್ಟು 45 ಮಂದಿ ಪತ್ರಕರ್ತರಿಗೆ ಈ ಬಾರಿ ಮಾಧ್ಯಮ ಅಕಾಡಮಿ ಪ್ರಶಸ್ತಿ ಲಭಿಸಿದೆ.
Next Story





