Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶ್ರೀಗಳು ಶೀಘ್ರ ಗುಣಮುಖರಾಗಲಿ:...

ಶ್ರೀಗಳು ಶೀಘ್ರ ಗುಣಮುಖರಾಗಲಿ: ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ27 Jan 2018 6:50 PM IST
share
ಶ್ರೀಗಳು ಶೀಘ್ರ ಗುಣಮುಖರಾಗಲಿ: ಪರಮೇಶ್ವರ್

ತುಮಕೂರು,ಜ.27: ನಮ್ಮೆಲ್ಲರ ಆರಾಧ್ಯ ದೈವ ಶತಾಯುಷಿ, ನಡೆದಾಡುವ ದೇವರು, ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ಶೀಘ್ರ ಸುಧಾರಿಸಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ಹೇಳಿದರು. 

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳಿಗೆ ಬಿಜಿಎಸ್ ಆಸ್ಪತ್ರೆಯಲ್ಲಿ ನಿನ್ನೆ ಸ್ಟೆಂಟ್ ಹಾಕಿದ್ದಾರೆ. ಸದ್ಯ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೂ ಹತ್ತಾರು ವರ್ಷ ಕಾಲ ಸಮಾಜಕ್ಕೆ ಸೇವೆಯನ್ನು ಮಾಡುವಂತಹ ಶಕ್ತಿಯನ್ನು ಶ್ರೀಗಳಿಗೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. 

ನಮ್ಮೆಲ್ಲರಿಗೂ ಶ್ರೀಗಳ ಆಶೀರ್ವಾದ, ಮಾರ್ಗದರ್ಶನ ಅಗತ್ಯವಿದೆ ಎಂದು ಅವರು ಹೇಳಿದರು. 

ಸರ್ವ ಪಕ್ಷ ಸಭೆ ವಿಚಾರ: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಸಂಬಂಧ ವಸ್ತು ಸ್ಥಿತಿ ಏನೆಂಬುದು ತಿಳಿಯುವುದಕ್ಕೆ ಮುಖ್ಯಮಂತ್ರಿಗಳು ಸರ್ವ ಪಕ್ಷ ಸಭೆ ಕರೆದಿದ್ದಾರೆ. ಚರ್ಚೆಯಲ್ಲಿ ಏನು ತೀರ್ಮಾನ ಆಗುತ್ತದೆ ಎಂಬುದನ್ನು ನೋಡಬೇಕು ಎಂದರು.

ರಾಜ್ಯದಲ್ಲಿ ನಮ್ಮ ಪಕ್ಷದ ಸರ್ಕಾರ ಅಧಿಕಾರದಲ್ಲಿರುವುದರಿಂದ ನಾನು ಹೋಗುವ ಅಗತ್ಯವಿಲ್ಲ. ನಮ್ಮ ಮುಖ್ಯಮಂತ್ರಿಗಳು, ಸಚಿವರು ಸಭೆಯಲ್ಲಿ ಭಾಗಿಯಾಗಿರುತ್ತಾರೆ. ಹಾಗಾಗಿ ನಾನು ಹೋಗುವುದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಅಲ್ಪಸಂಖ್ಯಾತರ ಮೇಲೆ ಅನಗತ್ಯವಾಗಿ ಕೇಸ್‍ಗಳನ್ನು ಹಾಕಿದ್ದರೆ ಅದನ್ನು ಕಾನೂನು ರೀತಿಯಲ್ಲಿ ಪರಿಶೀಲನೆ ನಡೆಸಿ ಸಂಪುಟ ಸಭೆಯಲ್ಲಿ ಚರ್ಚಿಸಿ ವಾಪಸ್ ತೆಗೆದುಕೊಳ್ಳಲಾಗುವುದು. ಏಕಾಏಕಿ ಸಮ್ಮನೇ ವಾಪಸ್ ಪಡೆಯಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾನೂನಿನ ಚೌಕಟ್ಟಿನಲ್ಲಿ ಇಂತಹ ತೀರ್ಮಾನವನ್ನು ಎಲ್ಲರೂ ಸೇರಿ ಚರ್ಚಿಸಿ ಕೈಗೊಳ್ಳುತ್ತಾರೆ. ಆದರೆ ಬಿಜೆಪಿಯವರು ಈ ವಿಚಾರದಲ್ಲಿ ಇಲ್ಲಸಲ್ಲದ ಗೊಂದಲ ಸೃಷ್ಠಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಈ ಸಂದರ್ಭದಲ್ಲಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಶಾಸಕ ಡಾ. ರಫೀಕ್‍ಅಹಮದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X