ಜ.30: ಉಡುಪಿ ಜಿಲ್ಲಾ ಪತ್ರಕರ್ತರ ಕ್ರೀಡಾಕೂಟ
ಉಡುಪಿ, ಜ.27: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವು ಜ.30ರ ಬೆಳಗ್ಗೆ 9 ಕ್ಕೆ ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕ್ರೀಡಾಕೂಟವನ್ನು ರಾಜ್ಯ ಯುವಜನ ಸೇವೆ, ಕ್ರೀಡೆ ಹಾಗೂ ಮೀನುಗಾರಿಕಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಆನಂದ ಸಿ ಕುಂದರ್, ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು ಮತ್ತು ಕ್ರೀಡಾ ಕಾರ್ಯದರ್ಶಿ ಹರೀಶ್ ಪಾಲೆಚ್ಚಾರ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಕ್ರೀಡಾಕೂಟದಲ್ಲಿ ಪುರುಷರಿಗೆ 100, 200 ಮೀ. ಓಟ, ರಿಲೆ, 100 ಮೀ ನಡಿಗೆ, ಗುಂಡು ಎಸೆತ, ಉದ್ದ ಜಿಗಿತ, ಗೋಣಿ ಚೀಲ ಓಟ, ಹಿಮ್ಮುಖ ಓಟ, ಮೂರು ಕಾಲಿನ ಓಟ, ಸಂಗೀತ ಕುರ್ಚಿ, ಮಡಕೆ ಒಡೆಯುವ ಸ್ಪರ್ಧೆ.
ಮಹಿಳೆಯರಿಗೆ: 100 ಮೀ. ಓಟ, 100 ಮೀ. ನಡಿಗೆ, ಗುಂಡು ಎಸೆತ, ಸಂಗೀತ ಕುರ್ಚಿ, ಮಡಕೆ ಒಡೆಯುವುದು, ಗೋಣಿ ಚೀಲ ಓಟ, ಬಾಸ್ಕೆಟಿಗೆ ಬಾಲ್ ಹಾಕುವುದು, ಬಿಸ್ಕೆಟ್ ತಿನ್ನುವುದು, ಬಲೂನ್ ಒಡೆಯುವುದು.
40 ವರ್ಷ ಮೇಲ್ಪಟ್ಟವರಿಗೆ: 100 ಮೀ.ನಡಿಗೆ, 100 ಮೀ.ಓಟ, ಗುಂಡು ಎಸೆತ, ಬಾಸ್ಕೆಟಿಗೆ ಬಾಲ್ ಹಾಕುವುದು.
ಗುಂಪು ಸ್ಪರ್ಧೆಗಳು: ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ







