ಉಡುಪಿ: ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಜ್ಯೋತಿಕಾ, ಪೂರ್ಣಿಮಾ
ಉಡುಪಿ, ಜ.27: ಹೊಸದಿಲ್ಲಿಯ ಜವಾಹರಲಾಲ್ ನೆಹರೂ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜ.30ರಿಂದ ಫೆ.3ರವರೆಗೆ ನಡೆಯಲಿರುವ ಮೊದಲ ರಾಷ್ಟ್ರೀಯ ಖೇಲೋ ಇಂಡಿಯಾ ಸ್ಕೂಲ್ ಗೇಮ್ಸ್ನ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಉಡುಪಿಯಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಾದ ಜ್ಯೋತಿಕಾ ಮತ್ತು ಪೂರ್ಣಿಮಾ ವಿ. ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ.
ಇವರು 200ಮೀ, 400ಮೀ ಓಟ, ರಿಲೇ ಮತ್ತು 100ಮೀ ಹರ್ಡಲ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಇವರು ಕ್ರೀಡಾ ವಸತಿ ನಿಲಯದ ತರಬೇತುದಾರ ಅನಂತರಾಮ ಕೆ. ಅವರಿಂದ ತರಬೇತಿ ಪಡೆದಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆ ತಿಳಿಸಿದೆ.
Next Story





