ಬ್ರಹ್ಮಾವರ ಕೃಷಿ ಕೇಂದ್ರದಲ್ಲಿ ಮೌಲ್ಯವರ್ಧನೆ ತರಬೇತಿ
ಉಡುಪಿ, ಜ.27: ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಉಡುಪಿ ಜಿಲ್ಲೆಯ ಯುವಕ, ಯುವತಿಯರಿಗೆ, ರೈತ ಹಾಗೂ ರೈತ ಮಹಿಳೆಯರಿಗೆ ಸ್ವ-ಉದ್ಯೋಗ ಕಲ್ಪಿಸಲು ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಮೌಲ್ಯವರ್ಧನೆ ಕುರಿತು ಅಲ್ಪಾವಧಿ (ಪ್ರಮಾಣ ಪತ್ರ) ತರಬೇತಿ ಕಾರ್ಯಕ್ರಮವನ್ನು ಫೆ.12 ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದೆ.
ಆಸಕ್ತ ನಿರುದ್ಯೋಗಿ ಯುವಕ/ ಯುವತಿಯರು ಮತ್ತು ರೈತ ಹಾಗೂ ರೈತಮಹಿಳೆಯರು ಸ್ವಸಹಾಯ ಸಂಘದ ಸದಸ್ಯರುಗಳು ತಮ್ಮ ಹೆಸರನ್ನು ಖುದ್ದಾಗಿ ಅಥವಾ ದೂರವಾಣಿ ಮೂಲಕ (0820-2563923/8749088803) ನೊಂದಾಯಿಸಿಕೊಳ್ಳಬಹುದಾಗಿದೆ.
ಇಲ್ಲಿ ಕೇವಲ 30 ಮಂದಿಗೆ ಮಾತ್ರ ಅವಕಾಶವಿದ್ದು, ಮೊದಲು ಹೆಸರು ನೊಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು. ಹೆಸರು ನೊಂದಾಯಿಸಲು ಫೆ.10ರಂದು ಕೊನೆಯ ದಿನವಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.
Next Story





