Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.1ರಿಂದ ರಾಜ್ಯಮಟ್ಟದ ಯುವಜನ ಮೇಳ:...

ಫೆ.1ರಿಂದ ರಾಜ್ಯಮಟ್ಟದ ಯುವಜನ ಮೇಳ: ಅದ್ದೂರಿಯಾಗಿ ನಡೆಸಲು ತೀರ್ಮಾನ -ಎಸಿ ಕೃಷ್ಣಮೂರ್ತಿ

ವಾರ್ತಾಭಾರತಿವಾರ್ತಾಭಾರತಿ27 Jan 2018 11:28 PM IST
share

ಪುತ್ತೂರು, ಜ. 27: ರಾಜ್ಯಮಟ್ಟದ ಯುವಜನ ಮೇಳವು ಫೆ.1 ರಿಂದ 4 ರ ತನಕ ಪುತ್ತೂರಿನ ಸುದಾನ ವಸತಿಯುತ ಶಾಲೆಯಲ್ಲಿ ಜರುಗಲಿದೆ. ಮೊದಲ ಬಾರಿಗೆ ಸಿಕ್ಕಿರುವ ಈ ರಾಜ್ಯಮಟ್ಟದ ಯುವಜನ ಮೇಳವನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಹಾಯಕ ಕಮೀಷನರ್ ಹೆಚ್.ಕೆ.ಕೃಷ್ಣಮೂರ್ತಿ ತಿಳಿಸಿದರು. 

ಅವರು ಎಸಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಕರ್ನಾಟಕ ಸರಕಾರ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಮಂಗಳೂರು, ಜಿಲ್ಲಾ ಪಂಚಾಯತ್ ಮಂಗಳೂರು, ತಾ.ಪಂ ಪುತ್ತೂರು, ನಗರಸಭೆ, ದ.ಕ.ಜಿಲ್ಲಾ ಮತ್ತು ರಾಜ್ಯ ಯುವಜನ ಒಕ್ಕೂಟ, ಸುದಾನ ವಸತಿಯುತ ಶಾಲೆ ನೆಹರುನಗರ ಪುತ್ತೂರು, ತಾಲೂಕು ಯುವಜನ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಯುವಜನ ಮೇಳ ಪುತ್ತೂರಿನಲ್ಲಿ ನಡೆಯಲಿದ್ದು, ರಾಜ್ಯದ 30 ಜಿಲ್ಲೆಗಳಿಂದ 5760 ಸ್ಪರ್ಧಿಗಳು, ತೀರ್ಪುಗಾರರು, ಅಧಿಕಾರಿಗಳು, ಸ್ವಯಂ ಸೇವಕರು, ಪ್ರೇಕ್ಷಕರು ಸೇರಿ ಸುಮಾರು 7ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಈ ಹಿಂದೆ ರಾಜ್ಯಮಟ್ಟದ ಯುವಜನ ಮೇಳವು ತಾಲೂಕು ಮಟ್ಟ, ಜಿಲ್ಲಾ ಮಟ್ಟ ವಿಭಾಗಮಟ್ಟವಾಗಿ ನಾಲ್ಕು ವಿಭಾಗಗಳಿಂದ ರಾಜ್ಯಮಟ್ಟಕ್ಕೆ 800 ಸ್ಪರ್ಧಾಳುಗಳು ಭಾಗವಹಿಸುತ್ತಿದ್ದರು. ಆದರೆ ಇದೀಗ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದಿಂದ ನೇರವಾಗಿ ರಾಜ್ಯಮಟ್ಟದಲ್ಲಿ ಭಾಗವಹಿಸುವುದರಿಂದ ಪ್ರತೀ ಜಿಲ್ಲೆಯ 192 ಸ್ಪರ್ಧಾಳುಗಳಂತೆ 30 ಜಿಲ್ಲೆಗಳಿಂದ 5760 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ಬರುವ ಎಲ್ಲಾ ಸ್ಪರ್ಧಾಳುಗಳಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಉತ್ತಮವಾದಂತಹ ವಸತಿ ವ್ಯವಸ್ಥೆಯನ್ನು ವಿವಿಧ ವಿದ್ಯಾ ಸಂಸ್ಥೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಅತ್ಯುತ್ತಮ ರೀತಿಯ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಆಗಮಿಸುವ ಎಲ್ಲಾ ಸ್ಪರ್ಧಾಳುಗಳನ್ನು ರೈಲ್ವೇ ನಿಲ್ದಾಣದಿಂದ ಮತ್ತು ಬಸ್ ನಿಲ್ದಾಣದಿಂದ ವಿಶೇಷವಾಗಿ ಸ್ವಾಗತಿಸಿ, ಸ್ಪರ್ಧಾ ಸ್ಥಳಕ್ಕೆ ಕೊಂಡೊಯ್ಯುವ ವ್ಯವಸ್ಥೆ ಮಾಡಲಾಗಿದೆ. ನಿಷ್ಪಕ್ಷಪಾತವಾದ ತೀರ್ಪಿಗಾಗಿ ರಾಜ್ಯದಿಂದ ಸುಮಾರು 40 ಜನ ಜಾನಪದ ಪದವೀದರರನ್ನು ನಿರ್ಣಾಯಕರನ್ನಾಗಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಶಾಸಕಿ, ರಾಜ್ಯ ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ.ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಮೇಳವನ್ನು ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್‌ರವರು ಉದ್ಘಾಟಿಸಲಿದ್ದಾರೆ.  ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್ ಮತ್ತು ಜಿಲ್ಲೆಯ ಶಾಸಕರುಗಳು, ಜಿ.ಪಂ ಅಧ್ಯಕ್ಷರುಗಳು, ಸದಸ್ಯರುಗಳು, ತಾ.ಪಂ ಅಧ್ಯಕ್ಷರು ಸದಸ್ಯರುಗಳು, ನಗರಸಭಾ ಅಧ್ಯಕ್ಷರು, ಸದಸ್ಯರು ಮತ್ತು ವಿಶೇಷ ಆಹ್ವಾನಿತ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕಾರ್ಯಕ್ರಮಕ್ಕೆ ಪೂರ್ಣ ಮಾರ್ಗದರ್ಶನ ನೀಡಲಿದ್ದಾರೆ ಎಂದು ಸಹಾಯಕ ಕಮೀಷರ್ ಹೆಚ್.ಕೆ.ಕೃಷ್ಣಮೂರ್ತಿ ಹೇಳಿದರು.

ಅದ್ದೂರಿಯ ಸ್ವಾಗತ ಮೆರವಣಿಗೆ: ಫೆ.1 ರಂದು ಸಂಜೆ ಗಂಟೆ 4ಕ್ಕೆ ಸುದಾನ ವಸತಿ ಶಾಲೆಯ ಭವ್ಯ ರಂಗಮಂದಿರದಲ್ಲಿ ಯುವಜನಮೇಳದ ಉದ್ಘಾಟನೆ ನಡೆಯಲಿದೆ. ಅದಕ್ಕೆ ಮೊದಲು ಮಧ್ಯಾಹ್ನ ಇಲ್ಲಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ರಾಜ್ಯದ 30 ಜಿಲ್ಲೆಗಳಿಂದ ಬಂದ ಸ್ಪರ್ಧಿಗಳು ಹಾಗೂ ಜಿಲ್ಲೆಯಾದ್ಯಂತ ಯುವಕ ಯವತಿಯರು ಮೆರವಣಿಗೆ ಮೂಲಕ ಸ್ಪರ್ಧಾ ಕಾರ್ಯಕ್ರಮದ ಕಡೆ ತೆರಳಲಿದ್ದಾರೆ. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿಯವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಕೇರಳದ ಚೆಂಡೆ, ಸಾಗರ ಮತ್ತು ಬೆಂಗಳೂರು ಡೊಳ್ಳು, ಮಂಡ್ಯದ ತಮಟೆ, ಕಲ್ಲಡ್ಕ ಕೀಲು ಕುದುರೆ ಯುವಕ ಮಂಡಲ, ಯುವತಿಮಂಡಲ ಹಾಗೂ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಮೆರವಣಿಗೆ ನಡೆಯಲಿದೆ ಎಂದು ಹೆಚ್.ಕೆ.ಕೃಷ್ಣಮೂರ್ತಿ ಹೇಳಿದರು.

3 ವೇದಿಕೆಗಳಲ್ಲಿ ಏಕ ಕಾಲದಲ್ಲಿ ಸ್ಪರ್ಧೆಗಳು: ಸ್ಪರ್ಧೆಗಳು ಅವಧಿಯೊಳಗೆ ನಡೆಸುವ ಉದ್ದೇಶದಿಂದ ಸುದಾನ ವಸತಿಯುತ ಶಾಲೆಯಲ್ಲಿ 3 ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಎಲ್ಲಾ ಸ್ಪರ್ಧೆಗಳು ಏಕಕಾಲದಲ್ಲಿ ಜರುಗಲಿದೆ. ಸುದಾನ ವತಿ ಶಾಲೆಯ ಪಕ್ಕದ ಬಿ.ಇ.ಎಂ ಶಾಲೆಯಲ್ಲಿ ಒಂದು ವೇದಿಕೆ, ಸುದಾನ ಶಾಲೆಯಲ್ಲಿ 2 ವೇದಿಕೆಗಳನ್ನು ನಿರ್ಮಿಸಲಾಗಿದೆ. ಸ್ಪರ್ಧಾ ಕಾರ್ಯಕ್ರಮದ ಜವಾಬ್ದಾರಿಯನ್ನು ವಿವಿಧ ಜಿಲ್ಲೆಯ ಮತ್ತು ತಾಲೂಕಿನ ಎಲ್ಲಾ ಅಧಿಕಾರಿಗಳಿಗೆ ಹಂಚಲಾಗಿದೆ ಎಂದು ಹೆಚ್.ಕೆ.ಕೃಷ್ಣಮೂರ್ತಿ ಹೇಳಿದರು.

ಸಮಾರೋಪ: ಫೆ. 4ರಂದು ಮಧ್ಯಾಹ್ನ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಸುಂದರ ಕಾರ್ಯಕ್ರಮಕ್ಕೆ ಎಲ್ಲಾ ಅತಿಥಿಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯದ ಯುವಜನ ಒಕ್ಕೂಟ, ಜಿಲ್ಲೆಯ ಯುವಜನ ಒಕ್ಕೂಟ ಮತ್ತು ತಾಲೂಕಿನ ಯುವಜನ ಒಕ್ಕೂಟ ಮತ್ತು ಜಿಲ್ಲೆಯಾದ್ಯಂತ ಯುವಕ ಯುವತಿಯವರು ಕೈಜೋಡಿಸಲಿದ್ದಾರೆ. ಸಚಿವ ರಮಾನಾಥ ರೈ ಬಹುಮಾನ ವಿತರಣೆ ಮಾಡಲಿದ್ದಾರೆ. ಶಾಸಕಿ ಶಕುಂತಳಾ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಸದಸ್ಯ ಜೀವಂಧರ್ ಜೈನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಪ್ರಶಸ್ತಿಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅನೇಕ ಅಥಿಗಳು ಭಾಗವಹಿಸಲಿದ್ದಾರೆ ಎಂದು ಸಹಾಯಕ ಕಮೀಷನರ್ ಹೆಚ್.ಕೆ.ಕೃಷ್ಣಮೂರ್ತಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ದ.ಕ.ಜಿಲ್ಲಾ ಯವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಸಹಾಯ ಯುವ ಸಬಲೀಕರಣ ಕ್ರೀಡಾಧಿಕಾರಿ ಮಾಮಚ್ಚನ್ ಎಂ, ಸುಳ್ಯದ ಕ್ರೀಡಾಧಿಕಾರಿ ಹಾಗೂ ಯುವಜನ ಮೇಳದ ಕಾರ್ಯದರ್ಶಿ ದೇವರಾಜ್ ಮುತ್ಲಾಜೆ, ಸುದಾನ ವಸತಿಯುತ ಶಾಲೆಯ ಮುಖ್ಯಗುರು ಶೋಭಾ ನಾಗರಾಜ್ ಉಪಸ್ಥಿತರಿದ್ದರು.

ದಾನಿಗಳ ಸಹಾಯ ಹಸ್ತಕ್ಕೆ "ಬ್ಯಾಂಕ್ ಖಾತೆ " 

ಯುವಜನ ಮೇಳದ ಖರ್ಚು ವೆಚ್ಚ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಾನಿಗಳ ಸಹಾಯ ಹಸ್ತಕ್ಕೆ ರಾಜ್ಯಮಟ್ಟದ ಯುವಜನ ಮೇಳ ಸಮಿತಿ ಮುಂದಾಗಿದ್ದು, ಈಗಾಗಲೇ ಜಿಲ್ಲಾಧಿಕಾರಿ ಮತ್ತು ಪುತ್ತೂರು ತಾ.ಪಂ ಕಾರ್ಯನಿರ್ವಹಣಾಧಿಕಾರಿಯವರ ಜಂಟಿ ಖಾತೆಯನ್ನು ಬೆಂಗಳೂರಿನ ಕೆನರಾ ಬ್ಯಾಂಕ್‌ನಲ್ಲಿ ತೆರೆಯ ಲಾಗಿದ್ದು, ಆ ಖಾತೆಗೆ ದಾನಿಗಳು ತಮ್ಮ ನೆರವಿನ ಹಸ್ತವನ್ನು ನೀಡುವಂತೆ ಸಹಾಯಕ ಆಯುಕ್ತರಾದ ಹೆಚ್.ಕೆ.ಕೃಷ್ಣ ಮೂರ್ತಿ ಹೇಳಿದರು.

ಬ್ಯಾಂಕ್ ಖಾತೆ ಹೆಸರು : ಸ್ಟೇಟ್ ಯೂತ್ ರ್ಯಾಲಿ ಆರ್ಗನೈಜೇಶನ್ ಕಮಿಟಿ 2017-18. ಕೆನರಾ ಬ್ಯಾಂಕ್ ಗಾಂಧಿನಗರ್. ಖಾತೆ ಸಂಖ್ಯೆ: 0631201001094. ಐಎಫ್‌ಸಿ ಕೋಡ್: ಸಿ.ಎನ್.ಆರ್.ಬಿ. 0000631.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X