ವಿದ್ಯಾರ್ಥಿನಿಯರ ಸುರಕ್ಷತೆಗೆ ಎಸ್‌ಐಒ ಆಗ್ರಹ
ಉಡುಪಿ, ಜ.28: ರಾಜ್ಯದಲ್ಲಿ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯದ ಸರಣಿ ನಿರಂತರವಾಗಿ ಮುಂದುವರಿದಿದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿನಿ ಯರ ಸುರಕ್ಷತೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಉಡುಪಿ ಜಿಲ್ಲಾ ಎಸ್‌ಐಒ ಒತ್ತಾಯಿಸಿದೆ.
ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಅದರೊಂದಿಗೆ ಎಲ್ಲ ಶಾಲಾ- ಕಾಲೇಜಿನ ತರಗತಿಗಳಿಗೆ, ಶಿಕ್ಷಕರ ಕೊಠಡಿಗೆ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ನಿರ್ಜನ ಪ್ರದೇಶದಿಂದ ಬರುವ ವಿದ್ಯಾರ್ಥಿನಿಯರ ರಕ್ಷಣೆಗಾಗಿ ಸೂಕ್ತ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿನಿಯರ ಹಾಸ್ಟೆಲ್ ಸುರಕ್ಷತೆಯ ಬಗ್ಗೆಯೂ ಗಮನ ಹರಿಸಬೇಕೆಂದು ಎಸ್‌ಐಒ ಪ್ರಕಟಣೆಯಲ್ಲಿ ತಿಳಿಸಿದೆ.
Next Story





