Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶಕ್ಕೆ ಅಂಬೇಡ್ಕರ್ ಬರೆದ ಸಂವಿದಾನವೇ...

ದೇಶಕ್ಕೆ ಅಂಬೇಡ್ಕರ್ ಬರೆದ ಸಂವಿದಾನವೇ ಪವಿತ್ರ ಗ್ರಂಥ: ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ28 Jan 2018 6:33 PM IST
share
ದೇಶಕ್ಕೆ ಅಂಬೇಡ್ಕರ್ ಬರೆದ ಸಂವಿದಾನವೇ ಪವಿತ್ರ ಗ್ರಂಥ: ಸಚಿವ ಯು.ಟಿ.ಖಾದರ್

ಕೊಣಾಜೆ, ಜ. 28: ಅಂಬೇಡ್ಕರ್ ಅವರು ಸಂವಿದಾನ ಬರೆಯುವ ಸಂದರ್ಭ ಮತದಾನ ಹಕ್ಕಿನ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಈ ಸಂದರ್ಭ ಬಡವ, ಶ್ರೀಮಂತ ಎನ್ನದೆ 18 ವರ್ಷ ಪೂರ್ತಿಯಾದವರಿಗೆ ಮತದಾನದ ಹಕ್ಕು ನೀಡಲಾಯಿತು. ಇದರ ಫಲವಾಗಿ ಸಾಮಾನ್ಯ ಜನರೂ ತಮಗೆ ಬೇಕಾದ ಪ್ರತಿನಿಧಿಯನ್ನು ಚುನಾಯಿಸುವ ಅಧಿಕಾರ ಲಭಿಸಿತು. ಆಯಾ ಧರ್ಮಕ್ಕೆ ಪವಿತ್ರ ಗ್ರಂಥಗಳಿರುವಂತೆ ದೇಶಕ್ಕೆ ಅಂಬೇಡ್ಕರ್ ಬರೆದ ಸಂವಿದಾನವೇ ಪವಿತ್ರ ಗ್ರಂಥ ಎಂದು ಆಹಾರ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಡಾ.ಅಂಬೇಡ್ಕರ್ ವಾದ ಪಾವೂರು ಗ್ರಾಮ ಸಮಿತಿ ಆಶ್ರಯದಲ್ಲಿ  ಪಾವೂರು ಕಂಬ್ಲಪದವಿನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಡಾ.ಬಿ.ಆರ್.ಸಂಬೇಡ್ಕರ್ ಸಂಸ್ಮರಣೆ ಹಾಗೂ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜನಪ್ರತಿನಿಧಿಗಳು ಕನಿಷ್ಟ ಐದು ವರ್ಷಕ್ಕೊಮ್ಮೆಯಾದರೂ ಜನರ ಕಾಲಬುಡಕ್ಕೆ ಬರುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿದಾನ ಕಾರಣ ಎಂದು ಹೇಳಿದರು.

ಸಭಾ ಕಾರ್ಯಕ್ರಮ ಉದ್ಘಾಟಿಸಿದ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ತಮಗೆ ಅನ್ಯಾಯವವಾಯಿತು ಎನ್ನುವ ಕಾರಣಕ್ಕೆ ಸಂವಿದಾನದಲ್ಲಿ ಸೇಡು ತೀರಿಸಿಲ್ಲ. ಆದರೆ ಇಂದು ಅವರ ಸಂವಿದಾನವನ್ನೇ ಬದಲಾಯಿಸುವ ಬಗ್ಗೆ ಮಾತನಾಡುವವರಿದ್ದು, ಅಂತಹವರು ತಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳುವು ಒಳಿತು. ದಲಿತರಿಗಿರುವ ಮೀಸಲಾತಿ ರದ್ದುಗೊಳಿಸಿ ಸಮಾನ ನಾಗರಿಕ ಸಂಹಿತೆ ಜಾರಿ ಬಗ್ಗೆ ಮಾತನಾಡುವವರು ಶೌಚಗುಂಡಿ, ಕಸ ಗುಡಿಸುವ ಕಾಯಕದಲ್ಲೂ ಸಮಾನತೆ ಕಾಪಾಡಲಿ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ಗಣೇಶ್ ಕಾಮತ್, ನಿವೃತ್ತ ಸರ್ಕಾರಿ ನೌಕರೆ ಕಮಲಾ ಎನ್, ಪವರ್ ಲಿಫ್ಟರ್ ಸಂಜೀವ ಸೂಟರ್‌ಪೇಟೆ, ಸಂಘಟಕ ರಘುವೀರ್ ಸೂಟರ್‌ಪೇಟೆ ಹಾಗೂ ನೃತ್ಯಪಟು ಮೇಘನಾ ಅತ್ತಾವರ ಅವರನ್ನು ಸನ್ಮಾನಿಸಲಾಯಿತು.

ದಸಂಸ ಪಾವೂರು ಗ್ರಾಮ ಸಮಿತಿ ಅಧ್ಯಕ್ಷ ಮನೋಜ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಪಾವೂರು ಗ್ರಾಮ ಪಂ. ಅಧ್ಯಕ್ಷ ಫಿರೋಝ್ ಮಲಾರ್, ಮಾಜಿ ಉಪಾಧ್ಯಕ್ಷ ವಲೇರಿಯನ್ ಡಿಸೋಜ, ಪಜೀರು ಗ್ರಾಮ ಪಂ. ಮಾಜಿ ಅಧ್ಯಕ್ಷ ಭರತ್‌ರಾಜ್ ಶೆಟ್ಟಿ ಪಜೀರುಗುತ್ತು, ಪಾವೂರು ಗ್ರಾ.ಪಂ. ಸದಸ್ಯರಾದ ಎಂ.ಪಿ.ಹಸನ್, ಮಜೀದ್ ಸಾತ್ಕೋ, ವಿವೇಕ್ ರೈ, ಮಾಜಿ ಸದಸ್ಯ ಮಹಮ್ಮದ್, ಮಂಗಳೂರು ವಿವಿ ಪ್ರಾಧ್ಯಾಪಕ ಡಾ.ಪ್ರಶಾಂತ್ ನಾಯಕ್, ಸಂಚಾರ ಮತ್ತು ಅಪರಾಧ ವಿಭಾಗ ಉಪಾಯುಕ್ತೆ ಉಮಾ ಪ್ರಶಾಂತ್, ಕೊಣಾಜೆ ಠಾಣಾಧಿಕಾರಿ ಅಶೋಕ್ ಪಿ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಶಂಕರಾನಂದ ಎನ್.ಇನವಳ್ಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಚಿತ್ತರಂಜನ್ ಪಾವೂರು, ಆರಾಧನ ಸಮಿತಿ ಸದಸ್ಯ ಗೋಪಾಲ, ಇಂಜಿನಿಯರ್ ಚಂದ್ರಶೇಖರ್, ಗುತ್ತಿಗೆದಾರ ವಿನ್ಸೆಂಟ್ ಲೋಬೋ, ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಸಂಚಾಲಕ ವಿನೇಶ್ ಮೂಳೂರು, ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘದ ಮಾಜಿ ಅಧ್ಯಕ್ಷ ಸುಭಾಷ್ ಧರ್ಮನಗರ, ವ್ಯಾಪಾರಿ ದಾವೂದ್ ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಕಿ ಉಷ್ಪಲತಾ ಸ್ವಾಗತಿಸಿದರು. ಬಸವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X