ಬಂಟ್ವಾಳ : ಪಲ್ಸ್ ಪೋಲಿಯೋ ಕಾರ್ಯಕ್ರಮ

ಬಂಟ್ವಾಳ, ಜ. 29: ಬಂಟ್ವಾಳ ತಾಲೂಕಿನಲ್ಲಿ ರಾಪ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಮಕ್ಕಳಿಗೆ ಪೋಲಿಯೋ ಹನಿ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವೈದ್ಯಾಧಿಕಾರಿ ಡಾ. ದೀಪಾ ಪ್ರಭು ಮಾತನಾಡಿ, ಬಂಟ್ವಾಳ ತಾಲೂಕಿನಲ್ಲಿ 0-5 ವರ್ಷದ 31,353 ಮಕ್ಕಳಿಗೆ ಪೋಲಿಯೋ ಹನಿ ನೀಡಬೇಕಾಗಿದ್ದು, ತಾಲೂಕಿನಾದ್ಯಂತ 196 ಬೂತ್‍ಗಳನ್ನು ತೆರೆಯಲಾಗಿದೆ. ಇದರಲ್ಲಿ 784 ಕಾರ್ಯಕರ್ತೆಯರು ಲಸಿಕಾದಾರರಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳ್ಲಿ ಪೋಲಿಯೋ ಬೂತ್‍ಗಳನ್ನು ತೆರೆಯಲಾಗಿದ್ದು 0-5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಅವರು ವಿನಂತಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಬಂಟ್ವಾಳ ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ್ಯೆ ಧನಲಕ್ಷ್ಮೀ ಸಿ. ಬಂಗೇರಾ, ಡಾ. ಸದಾಶಿವ ಆಡಳಿತ ವೈದ್ಯಾಧಿಕಾರಿ ಹಾಗೂ ರೋಟರಿ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.





