ಉಡುಪಿ : ಮಾನವ ಸರಪಳಿಗೆ ಜಿಲ್ಲಾ ಕಾಂಗ್ರೆಸ್ ಬೆಂಬಲ
ಉಡುಪಿ, ಜ.29: ಸೌಹಾರ್ದತೆಗಾಗಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ನಾಡಿನ ಶಾಂತಿ, ಸಾಮರಸ್ಯದ ಉಳಿವಿಗಾಗಿ ಹಾಗೂ ಕೋಮುವಾದದ ಅಳಿವಿಗಾಗಿ ನಾಳೆ ನಡೆಯಲಿರುವ ‘ಸೌಹಾರ್ದತೆಗಾಗಿ ಮಾನವ ಸರಪಳಿ’ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಬೆಂಬಲ ಘೋಷಿಸಿದೆ.
ನಾಳೆ ಅಪರಾಹ್ನ 3:30ಕ್ಕೆ ಉಡುಪಿ ಅಜ್ಜರಕಾಡು ಗಾಂಧಿ ಪ್ರತಿಮೆಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಗಾಂಧಿ ಪ್ರತಿಮೆಯವರೆಗೆ ಪ್ರಗತಿಪರ ಸಂಘಟನೆಗಳು ಆಯೋಜಿಸಿರುವ ಈ ಸೌಹಾರ್ದತೆಗಾಗಿ ಕರ್ನಾಟಕ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜನಾರ್ದನ ತೋನ್ಸೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





