Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೊಡ್ಡ ಬಜೆಟ್‍ಗಿಂತ ಸದಭಿರುಚಿಯ...

ದೊಡ್ಡ ಬಜೆಟ್‍ಗಿಂತ ಸದಭಿರುಚಿಯ ಚಿತ್ರವನ್ನು ಕನ್ನಡಿಗರು ಗೆಲ್ಲಿಸುತ್ತಾರೆ: ನಟ ಗುರುನಂದನ್

ವಾರ್ತಾಭಾರತಿವಾರ್ತಾಭಾರತಿ29 Jan 2018 8:24 PM IST
share
ದೊಡ್ಡ ಬಜೆಟ್‍ಗಿಂತ ಸದಭಿರುಚಿಯ ಚಿತ್ರವನ್ನು ಕನ್ನಡಿಗರು ಗೆಲ್ಲಿಸುತ್ತಾರೆ: ನಟ ಗುರುನಂದನ್

ಚಿಕ್ಕಮಗಳೂರು, ಜ.29: ನೂರು ಕೋಟಿಯ ದೊಡ್ಡ ಬಜೆಟ್ ಸಿನಿಮಾಗಿಂತ ನೂರು ಜನರ ಮನಮುಟ್ಟುವ ಸದಭಿರುಚಿಯ ಚಿತ್ರವನ್ನು ಕನ್ನಡದ ಜನ ಗೆಲ್ಲಿಸುತ್ತಾರೆಂಬ ನಂಬಿಕೆ ನನಗಿದೆ ಎಂದು ಫಸ್ಟ್ ರ್ಯಾಂಕ್ ರಾಜು ನಾಯಕ ನಟ ಗುರುನಂದನ್ ಹೇಳಿದರು.

ಅವರು ಸೋಮವಾರ ನಗರದ ಮಿಲನ್ ಚಿತ್ರ ಮಂದಿರದಲ್ಲಿ 2ನೇ ವಾರದಲ್ಲಿ ಪ್ರದರ್ಶನಗೊಳ್ಳುತ್ತಿರುವ ರಾಜು ಕನ್ನಡ ಮೀಡಿಯಂ ಚಿತ್ರ ವೀಕ್ಷಿಸಿ ನಂತರ ಅಭಿಮಾನಿಗಳ ಗೌರವ ಸ್ವೀಕರಿಸಿ ಮಾತನಾಡಿದರು.

ಚಿತ್ರಗಳಲ್ಲಿ ಬಜೆಟ್ ಪ್ರಾಮುಖ್ಯತೆಗಿಂತ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಕಥೆ ಮತ್ತು ಪಾತ್ರಗಳ ನಿರ್ವಹಣೆಗೆ ಕನ್ನಡದ ಜನ ಮನ್ನಣೆ ನೀಡುತ್ತಾರೆ ಎಂಬುದಕ್ಕೆ ಈ ಸಿನಿಮಾ ಸಾಕ್ಷಿಯಾಗಿ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿದೆ. ಅದರಲ್ಲೂ ನನ್ನ ತವರೂರಲ್ಲಿಯೇ ಅಭಿಮಾನಿಗಳ ಜೊತೆ ಚಿತ್ರ ವೀಕ್ಷಿಸಿದ್ದು ಬಹಳ ಸಂತೋಷ ಕೊಟ್ಟಿದೆ ಎಂದರು.

ದಶಕಗಳ ಹಿಂದೆ ಅಣ್ಣಾವ್ರ ಚಿತ್ರವನ್ನು ಇದೇ ಚಿತ್ರಮಂದಿರದಲ್ಲಿ ಕುಟುಂಬದೊಂದಿಗೆ ಕುಳಿತು ನೋಡಿದ ನೆನೆಪಿದೆ. ಕನ್ನಡ ನಾಡಿನ ಜನರ ಆಶೀರ್ವಾದ ದಿಂದ ಅದೇ ಪರದೆಯಲ್ಲಿ ನನ್ನ ಚಿತ್ರ ನೋಡುತ್ತಿದ್ದೇನೆ. ಇದು ನನ್ನ ಭಾಗ್ಯ. ರಾಜ್ಯದ 200 ಚಿತ್ರಮಂದಿರದಲ್ಲಿ ಈ ಚಿತ್ರ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಜನರು ಈ ಚಿತ್ರವನ್ನು ಸ್ವೀಕರಿಸಿರುವುದರಿಂದ ನನ್ನ ಮುಂದಿನ ಚಿತ್ರಗಳಿಗೆ ಸ್ಪೂರ್ತಿ ಹೆಚ್ಚಿದೆ. ನಟ ಸುದೀಪ್ ಉತ್ತಮ ಪಾತ್ರ ನಿರ್ವಹಿಸಿರುವುದು ಈ ಚಿತ್ರಕ್ಕೆ ಕಳೆ ತಂದಿದೆ ಎಂದು ಹೇಳಿದರು.

ಪರಭಾಷಾ ಚಿತ್ರಗಳ ಆರ್ಭಟದ ನಡುವೆಯೂ ಕನ್ನಡ ಚಿತ್ರ ಅಧ್ಬುತವಾಗಿ ನಿಂತಿದೆ ಎಂದರೆ ಅದರಲ್ಲಿ ಒಳ್ಳೆಯ ಸಂದೇಶ ಇದೆ ಎಂಬುವುದು ನನ್ನ ನಂಬಿಕೆ. ಫೆ.1 ರಂದು ಸಿಂಗಾಪುರ, ಆಸ್ಟ್ರೇಲಿಯಾ ಮತ್ತು ನಾರ್ತ್ ಅಮೇರಿಕಾಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಅಲ್ಲಿಗೂ ಭೇಟಿ ನೀಡುತ್ತೇನೆ. ತೆಲುಗು, ತಮಿಳು, ಬಾಲಿವುಡ್ ಚಿತ್ರಗಳಿಗೂ ಅವಕಾಶಗಳು ಬಂದಿದೆ. ಅನ್ಯಭಾಷೆ ಚಿತ್ರಗಳಲ್ಲಿ ಅಭಿನಯಿಸುವ ಯೋಚನೆ ಇನ್ನೂ ಮಾಡಿಲ್ಲ ಎಂದು ನುಡಿದರು.

ಹಾಸನ ಸೇರಿದಂತೆ ಇತರೆ ಜಿಲ್ಲೆಗಳಿಗೆ ಬೇಟಿ ನೀಡಿದ್ದು, ಚಿಕ್ಕಮಗಳೂರು, ಕಡೂರು, ಭದ್ರಾವತಿ ನಂತರ ಶಿವಮೊಗ್ಗ, ಮಂಗಳೂರು, ಹಾಗೂ ಉತ್ತರ ಕರ್ನಾಟಕ ಭಾಗಗಳಿಗೆ ತೆರಳಿ ಚಿತ್ರದ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.

ಚಿತ್ರಮಂದಿರಕ್ಕೆ ಆಗಮಿಸುತ್ತಿದ್ದಂತೆ ವ್ಯವಸ್ಥಾಪಕ ಶಿವಪ್ಪ ಹೂಗುಚ್ಚ ನೀಡಿ ಸ್ವಾಗತಿಸಿದರು. ಸಹನಟ ಅಮಿತ್  ಹಾಗೂ ಸುದರ್ಶನ್ ಇನ್ನಿತರರು ಜೊತೆಗಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X