ಜಗದೀಶ್ ಶೇಣವ ವಿರುದ್ಧ ಕ್ರಮಕ್ಕೆ ಮನವಿ

ಮಂಗಳೂರು, ಜ.29: ಕೋಮುಪ್ರಚೋದನಕಾರಿ ಭಾಷಣ ಮಾಡಿದ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ವಿರುದ್ಧ ಕಠಿಣ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ಯುವ ಜನತಾ ದಳದ ನಿಯೋಗವೊಂದು ದ.ಕ.ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ನಿಯೋಗದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಫೈಝಲ್ ರಹ್‌ಮಾನ್, ಕಾರ್ಯದರ್ಶಿ ಭರತ್ ಜಿ. ಹೆಗ್ಡೆ, ಮುಹಮ್ಮದ್ ಫೈಝಲ್, ಸುರತ್ಕಲ್ ಬ್ಲಾಕ್ ಅಧ್ಯಕ್ಷ ರತೀಶ್ ಕರ್ಕೇರ, ಮುಖಂಡರಾದ ಹಿತೇಶ್ ರೈ ಮತ್ತು ಸೈಯದ್ ಇಸ್ಮಾಯೀಲ್ ಉಪಸ್ಥಿತರಿದ್ದರು.
Next Story





