Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗೌರಿ ಹತ್ಯೆಯ ರೂವಾರಿಗಳು ದಕ್ಷಿಣ...

ಗೌರಿ ಹತ್ಯೆಯ ರೂವಾರಿಗಳು ದಕ್ಷಿಣ ಕನ್ನಡದಲ್ಲಿದ್ದಾರೆಂಬ ಅನುಮಾನವಿದೆ: ಎಚ್.ಎಸ್. ದೊರೆಸ್ವಾಮಿ

ಬೆಂಗಳೂರಿನಲ್ಲಿ 'ಗೌರಿ ದಿನ'

ವಾರ್ತಾಭಾರತಿವಾರ್ತಾಭಾರತಿ29 Jan 2018 9:12 PM IST
share
ಗೌರಿ ಹತ್ಯೆಯ ರೂವಾರಿಗಳು ದಕ್ಷಿಣ ಕನ್ನಡದಲ್ಲಿದ್ದಾರೆಂಬ ಅನುಮಾನವಿದೆ: ಎಚ್.ಎಸ್. ದೊರೆಸ್ವಾಮಿ

ಬೆಂಗಳೂರು, ಜ.29: ಪತ್ರಕರ್ತೆ ಗೌರಿ ಲಂಕೇಶ್‌ರನ್ನು ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎನ್ನುವ ವದಂತಿ ಎಲ್ಲೆಡೆ ಹಬ್ಬಿತ್ತು. ಗೌರಿಯನ್ನು ಗುಂಡಿಕ್ಕಿ ಕೊಂದವರು, ಹತ್ಯೆಯ ರೂವಾರಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದಾರೆಂಬ ಅನುಮಾನ ವ್ಯಕ್ತವಾಗುತ್ತಿದೆ. ಹೀಗಾಗಿ, ಈ ಭಾಗದಲ್ಲಿ ತನಿಖಾ ತಂಡ ಸೂಕ್ಷ್ಮವಾಗಿ ತನಿಖೆ ನಡೆಸಬೇಕು ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಆಗ್ರಹಿಸಿದ್ದಾರೆ.

ಸೋಮವಾರ ನಗರದ ಪುರಭವನದಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಜನ್ಮ ದಿನಾಚರಣೆ ಅಂಗವಾಗಿ ಗೌರಿ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ 'ಗೌರಿ ದಿನ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್‌ಐಟಿ ತಂಡದಿಂದ ಇತ್ತೀಚಿಗೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಹೀಗಾಗಿ, ಇದು ನಿಜವಾದರೆ ಕೂಡಲೇ ಅವರನ್ನು ಬಹಿರಂಗಪಡಿಸಬೇಕು ಎಂದು ಹೇಳಿದರು.

ದೇಶದಲ್ಲಿ ಬಿಜೆಪಿ ಹಾಗೂ ಅದರ ವೆುತ್ರಿಕೂಟ 20 ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕವನ್ನು ಗುರಿಯಾಗಿಸಿಕೊಂಡಿದ್ದಾರೆ. ಹೀಗಾಗಿ, ಯಾವುದೇ ಕಾರಣಕ್ಕೂ ಬಿಜೆಪಿಗೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ಕೆಲಸ ಮಾಡಬೇಕು ಎಂದ ಅವರು, ನಾನು ಯಾವುದೇ ಪಕ್ಷವನ್ನು ಓಲೈಕೆ ಮಾಡಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಚಾರಧಾರೆಗಳನ್ನು ಗಟ್ಟಿಗೊಳಿಸಬೇಕು: ಗೌರಿಯ ವಿಚಾರಗಳಿಂದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ ಗೌರಿ ಲೇಖನಿಯನ್ನು ಖಡ್ಗದಂತೆ ಬಳಸಿದ್ದರು. ಎಲ್ಲವನ್ನು ನೇರವಾಗಿ ಬರೆಯುತ್ತಿದ್ದರು. ತಪ್ಪು ದಾರಿ ಹಿಡಿದವರಿಗೆ ಸಿಂಹಸ್ವಪ್ನರಾಗಿದ್ದರು. ಕೊನೆಗೆ ದುಷ್ಕರ್ಮಿಗಳ ಗುಂಡಿಗೆ ಹತ್ಯೆ ಆಗಿದ್ದು ದೊಡ್ಡ ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್, ಲೇಖಕಿ ಕೆ.ನೀಲಾ, ಡಾ.ವಡ್ಡಗೆರೆ ನಾಗರಾಜಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X