Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಾಬೂಲ್ ಹೊಟೇಲ್ ದಾಳಿಯ ಉಗ್ರನಿಗೆ ಪಾಕ್...

ಕಾಬೂಲ್ ಹೊಟೇಲ್ ದಾಳಿಯ ಉಗ್ರನಿಗೆ ಪಾಕ್ ಗುಪ್ತಚರ ಸಂಸ್ಥೆಯ ತರಬೇತಿ

ವಿಶ್ವಸಂಸ್ಥೆಗೆ ಅಫ್ಘಾನ್ ರಾಯಭಾರಿ ಆರೋಪ

ವಾರ್ತಾಭಾರತಿವಾರ್ತಾಭಾರತಿ30 Jan 2018 10:34 PM IST
share
ಕಾಬೂಲ್ ಹೊಟೇಲ್ ದಾಳಿಯ ಉಗ್ರನಿಗೆ ಪಾಕ್ ಗುಪ್ತಚರ ಸಂಸ್ಥೆಯ ತರಬೇತಿ

ವಾಶಿಂಗ್ಟನ್, ಜ. 30: ಕಾಬೂಲ್‌ನ ಐಶಾರಾಮಿ ಇಂಟರ್‌ಕಾಂಟಿನೆಂಟಲ್ ಹೊಟೇಲ್ ಮೇಲೆ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರ ಪೈಕಿ ಓರ್ವನಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ತರಬೇತಿ ನೀಡಿತ್ತು ಎಂದು ಅಫ್ಘಾನಿಸ್ತಾನದ ಉನ್ನತ ರಾಜತಾಂತ್ರಿಕರೊಬ್ಬರು ಆರೋಪಿಸಿದ್ದಾರೆ.

ವಿಶ್ವಸಂಸ್ಥೆಗೆ ಅಫ್ಘಾನಿಸ್ತಾನದ ಖಾಯಂ ಪ್ರತಿನಿಧಿ ಮಹ್ಮೂದ್ ಸೈಕಾಲ್ ರವಿವಾರ ಟ್ವಿಟರ್ ಮೂಲಕ ಐಎಸ್‌ಐ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ.

‘‘ಕಾಬೂಲ್‌ನ ಇಂಟರ್‌ಕಾಂಟಿನೆಂಟಲ್ ಹೊಟೇಲ್ ಮೇಲೆ ಕಳೆದ ವಾರ ನಡೆದ ದಾಳಿಯಲ್ಲಿ ಭಾಗಿಯಾದ ಭಯೋತ್ಪಾದಕರ ಪೈಕಿ ಓರ್ವನ ತಂದೆ ಅಬ್ದುಲ್ ಕಹರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ತನ್ನ ಮಗನಿಗೆ ಪಾಕಿಸ್ತಾನದ ಐಎಸ್‌ಐ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದ ಚಮನ್‌ನಲ್ಲಿ ತರಬೇತಿ ನೀಡಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಕಹರ್ ಈಗ ಅಫ್ಘಾನಿಸ್ತಾನದ ಅಧಿಕಾರಿಗಳ ಸುಪರ್ದಿಯಲ್ಲಿದ್ದಾರೆ’’ ಎಂದು ಸೈಕಾಲ್ ಟ್ವೀಟ್ ಮಾಡಿದ್ದಾರೆ.

 ಜನವರಿ 20ರಂದು ಕಲಾಶ್ನಿಕೊವ್ ರೈಫಲ್‌ಗಳು ಮತ್ತು ಆತ್ಮಹತ್ಯಾ ದಿರಿಸುಗಳನ್ನು ಹೊಂದಿದ ತಾಲಿಬಾನಿ ಉಗ್ರರು ಇಂಟರ್‌ಕಾಂಟಿನೆಂಟಲ್ ಹೊಟೇಲ್ ಮೇಲೆ ದಾಳಿ ನಡೆಸಿದ್ದರು. ದಾಳಿಯಲ್ಲಿ ವಿದೇಶೀಯರು ಸೇರಿದಂತೆ 40 ಮಂದಿ ಮೃತಪಟ್ಟಿದ್ದಾರೆ.

ಭಯೋತ್ಪಾದಕರು 12 ಗಂಟೆಗಳಿಗೂ ಅಧಿಕ ಕಾಲ ಹೊಟೇಲ್‌ನಲ್ಲಿದ್ದು, ವಿದೇಶೀಯರಿಗಾಗಿ ಪ್ರತಿ ಕೋಣೆಯಲ್ಲೂ ಹುಡುಕಾಟ ನಡೆಸಿದ್ದರು.

ಪಾಕ್ ಸೇನೆಯಿಂದ ರಾತ್ರಿ ದರ್ಶಕ ಕನ್ನಡಕಗಳ ಪೂರೈಕೆ

‘‘ಮೈವಾಂಡ್‌ನ ಎಎನ್‌ಎ ನೆಲೆಯಲ್ಲಿ ತಾಲಿಬಾನ್ ದಾಳಿಕೋರರಲ್ಲಿ ಪತ್ತೆಯಾದ ರಾತ್ರಿದರ್ಶಕ ಕನ್ನಡಕಗಳು ಸೇನಾ ದರ್ಜೆಯ ಕನ್ನಡಕಗಳಾಗಿವೆ. ಅವುಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಲಾಗುವುದಿಲ್ಲ. ಅವುಗಳನ್ನು ಪಾಕಿಸ್ತಾನಿ ಸೇನೆಯು ಬ್ರಿಟಿಶ್ ಕಂಪೆನಿಯೊಂದರಿಂದ ಪಡೆದು ಕಾಶ್ಮೀರದಲ್ಲಿರುವ ಲಷ್ಕರ್ ಎ ತೊಯ್ಬಾ ಮತ್ತು ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್ ಉಗ್ರರಿಗೆ ಪೂರೈಸಿದೆ. ಲಷ್ಕರ್ ಎ ತೊಯ್ಬಾ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯಾಗಿದೆ’’ ಎಂದು ಅಫ್ಘಾನಿಸ್ತಾನ ರಾಯಭಾರ ಕಚೇರಿಯಲ್ಲಿರುವ ಸಾಂಸ್ಕೃತಿಕ ಅಧಿಕಾರಿ ಮಜೀದ್ ಕರಾರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X