ಉಡುಪಿ ಜಿಲ್ಲಾ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

ಉಡುಪಿ, ಜ.30: ರಾಜಕೀಯ, ಒಡೆಯುವ ಮೂಲಕ ಬಿಕ್ಕಟ್ಟು ಸೃಷ್ಠಿಸಿದರೆ, ಕ್ರೀಡೆ ಒಂದುಗೂಡಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸುತ್ತದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಲಾದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಕ್ರೀಡಾ ಚಟುವಟಿಕೆಯಿಂದ ನಮ್ಮಲ್ಲಿ ಒಗ್ಗಟ್ಟು ಪ್ರದರ್ಶಿಸುವುದರ ಜೊತೆಗೆೆ ಆರೋಗ್ಯ ವೃದ್ದಿಯಾಗುತ್ತದೆ. ಪತ್ರಕರ್ತರು ಪ್ರತಿದಿನ ಒತ್ತಡದಿಂದ ಕೆಲಸ ನಿರ್ವ ಹಿಸುತ್ತಿದ್ದು, ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆ ಒತ್ತಡಗಳನ್ನು ನಿವಾರಿಸಿ ಕೊಳ್ಳಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಉಪಸ್ಥಿತರಿದ್ದರು.
ಸಂಘದ ಕೋಶಾಧಿಕಾರಿ ದಿವಾಕರ್ ಹಿರಿಯಡಕ, ಕ್ರೀಡಾ ಕಾರ್ಯದರ್ಶಿ ಹರೀಶ್ ಪಾಲೆಚ್ಚಾರ್, ಪ್ರೆಸ್‌ಕ್ಲಬ್ ಸಂಚಾಲಕ ನಾಗರಾಜ್ ರಾವ್ ಉಪಸ್ಥಿತರಿ ದ್ದರು. ಅಧ್ಯಕ್ಷ ಗಣೇಶ್‌ಪ್ರಸಾದ್ ಪಾಂಡೇಲು ಸ್ವಾಗತಿಸಿದರು. ಪ್ರಧಾನ ಕಾರ್ಯ ದರ್ಶಿ ಸಂತೋಷ್ ಸರಳೇಬೆಟ್ಟು ವಂದಿಸಿದರು. ಚೇತನ್ ಮಟಪಾಡಿ ಕಾರ್ಯ ಕ್ರಮ ನಿರೂಪಿಸಿದರು.
ಬಳಿಕ ಪತ್ರಕರ್ತರಿಗಾಗಿ ಮಡಕೆ ಒಡೆಯುವ ಸ್ಪರ್ಧೆ, ಓಟ, ಮೂರು ಕಾಲು ಓಟ, ಗೋಣಿ ಚೀಲ ಓಟ, ಶಾಟ್‌ಪುಟ್, ಉದ್ದ ಜಿಗಿತ, ರಿಲೇ, ವಾಲಿ ಬಾಲ್, ಹಗ್ಗಜಗ್ಗಾಟ, ಕಬಡ್ಡಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸ ಲಾಗಿತ್ತು.







