Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯ ಕಾರ್ಯಸೂಚಿಗಳನ್ನು ಬುಡಮೇಲು...

ಬಿಜೆಪಿಯ ಕಾರ್ಯಸೂಚಿಗಳನ್ನು ಬುಡಮೇಲು ಮಾಡುತ್ತೇವೆ : ಡಿ.ಕೆ.ಶಿವಕುಮಾರ್

ಕೆಪಿಸಿಸಿ ಪ್ರಚಾರ ಸಮಿತಿಯ ಮೊದಲ ಸಭೆ

ವಾರ್ತಾಭಾರತಿವಾರ್ತಾಭಾರತಿ31 Jan 2018 8:48 PM IST
share
ಬಿಜೆಪಿಯ ಕಾರ್ಯಸೂಚಿಗಳನ್ನು ಬುಡಮೇಲು ಮಾಡುತ್ತೇವೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.31: ಹೊರ ರಾಜ್ಯದವರನ್ನು ಕರೆಸಿ ನಮ್ಮ ಸರಕಾರದ ವಿರುದ್ಧ ಆರೋಪಗಳನ್ನು ಮಾಡಿಸುವ ಮೂಲಕ ಬಿಜೆಪಿ ಜಾದೂ ಮಾಡಲಿಕ್ಕೆ ಹೊರಟಿದೆ. ಅವರ ಎಲ್ಲ ಕಾರ್ಯಸೂಚಿಗಳನ್ನು ಬುಡಮೇಲು ಮಾಡಲಾಗುವುದು ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕೆಪಿಸಿಸಿ ಪ್ರಚಾರ ಸಮಿತಿಯ ಮೊದಲ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ಯಾವ ಕಾರ್ಯಸೂಚಿಗಳು ಇಲ್ಲಿ ಯಶಸ್ವಿಯಾಗುವುದಿಲ್ಲ. ನಮ್ಮ ಸಾಮಾನ್ಯ ಕಾರ್ಯಕರ್ತನೂ ಪಕ್ಷ ಸಂಘಟನೆ ಮಾಡಲಿದ್ದಾನೆ ಎಂದರು.

ಸಾಕಷ್ಟು ಸಮೀಕ್ಷೆಗಳು ಈ ಬಾರಿ ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂದು ಹೇಳುತ್ತಿವೆ. ಆದರೆ, ಅದೆಲ್ಲವನ್ನೂ ರಾಜ್ಯದ ಮತದಾರ ಸುಳ್ಳಾಗಿಸಲಿದ್ದಾನೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

2013ರಲ್ಲಿ ಸರಕಾರ ರಚನೆ ಮಾಡಿದಾಗಿನಿಂದ ಸರಕಾರದ ಕಾರ್ಯಕ್ರಮಗಳನ್ನ ಜನರಿಗೆ ತಿಳಿಸುತ್ತಲೇ ಬಂದಿದ್ದೇವೆ. ಚುನಾವಣೆಯ ಹೊಸ್ತಿಲಿನಲ್ಲಿ ಪ್ರಚಾರವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಜಿಲ್ಲಾ, ಬ್ಲಾಕ್, ಬೂತ್ ಮಟ್ಟದಲ್ಲೂ ಪ್ರಚಾರ ಸಮಿತಿ ರಚನೆ ಮಾಡಲಾಗುವುದು. ಪ್ರತಿಯೊಬ್ಬ ಮತದಾರನಿಗೂ ತಲುಪುವ ಕೆಲಸವನ್ನು ಪ್ರಚಾರ ಸಮಿತಿ ಮಾಡಲಿದೆ ಎಂದು ಶಿವಕುಮಾರ್ ತಿಳಿಸಿದರು.

ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೆ 170 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಪೂರ್ಣಗೊಳಿಸಲಾಗಿದೆ. ರಾಜ್ಯ ಮಟ್ಟದ ಪ್ರಚಾರದ ರೀತಿಯಲ್ಲೆ ಆಯಾ ಕ್ಷೇತ್ರದ ಸಮಸ್ಯೆ ಹಾಗೂ ಯೋಜನೆಯ ಬಗ್ಗೆ ಬೂತ್ ಮಟ್ಟದಲ್ಲೂ ಪ್ರಚಾರ ಮಾಡಲಾಗುವುದು ಎಂದು ಅವರು ಹೇಳಿದರು.
ಕೇಂದ್ರದ ಬಿಜೆಪಿ ಸರಕಾರದ ವೈಫಲ್ಯವನ್ನು ಜನರ ಬಳಿ ಪ್ರಚಾರ ಸಮಿತಿ ಮುಖಾಂತರ ತೆಗದುಕೊಂಡು ಹೋಗಲಾಗುವುದು. ಆಯಾ ಕ್ಷೇತ್ರದಲ್ಲಿ ಸ್ಥಳೀಯ ವಿಚಾರಗಳನ್ನಿಟ್ಟುಕೊಂಡು ಸಮಿತಿ ಕೆಲಸ ಮಾಡಲಿದೆ ಎಂದು ಶಿವಕುಮಾರ್ ತಿಳಿಸಿದರು.

ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ದೇವಸ್ಥಾನಗಳಿಗೆ ಭೇಟಿ ನೀಡುವುದು ಮತಗಳಿಕೆಗಾಗಿ ಅಲ್ಲ, ಅದು ಅವರವರ ಮನಸ್ಸಿಗೆ ಬಿಟ್ಟ ವಿಚಾರ. ರಾಷ್ಟ್ರಧ್ವಜ ನಮ್ಮ ಧರ್ಮ ಅಂತಾ ರಾಹುಲ್‌ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯೆ ನಮಗೆ ದೇವಸ್ಥಾನ. ಫೆ.10ಕ್ಕೆ ರಾಹುಲ್‌ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಹಂಪಿಯ ವಿರೂಪಾಕ್ಷ ದೇವಸ್ಥಾನದ ದರ್ಶನ ಮಾಡಲಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ಇಂದು ನಡೆದ ಚುನಾವಣಾ ಸಮಿತಿಯ ಮೊದಲ ಸಭೆಯಲ್ಲಿ ಸಂಸದರಾದ ವೀರಪ್ಪಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಗೈರು ಹಾಜರಾಗಿದ್ದರು. ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಮಾಗಡಿಯ ಕಾರ್ಯಕ್ರಮದಲ್ಲಿದ್ದಾರೆ. ಶಾಸಕ ಅಂಬರೀಶ್ ಆರೋಗ್ಯ ಸಮಸ್ಯೆಯಿಂದ ಸಭೆಗೆ ಬಂದಿರಲಿಲ್ಲ. ಅವರು ನಮ್ಮ ಪಕ್ಷದ ಫೈರ್ ಬ್ರಾಂಡ್ ಇದ್ದ ಹಾಗೆ ಎಂದು ಅವರು ಹೇಳಿದರು.

ಎಂಐಎಂ ಅಧ್ಯಕ್ಷ ಅಸಾದುದ್ದೀನ್ ಉವೈಸಿ ಜೊತೆ ಬಿಜೆಪಿ ಹೊಂದಾಣಿಕೆ, ಮೈತ್ರಿ ಮಾಡಿಕೊಂಡಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ, ನಮಗೆ ಅಂತಹ ಸ್ಥಿತಿ ಇಲ್ಲ ಎಂದು ಶಿವಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X