Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಹುನಿರೀಕ್ಷೆಯ ಬಜೆಟ್-2018 ನಾಳೆ ಮಂಡನೆ

ಬಹುನಿರೀಕ್ಷೆಯ ಬಜೆಟ್-2018 ನಾಳೆ ಮಂಡನೆ

ಸಮತೋಲನ ಕಾಯ್ದುಕೊಳ್ಳಲು ಜೇಟ್ಲಿ ಕಠಿಣ ಕಸರತ್ತು

ವಾರ್ತಾಭಾರತಿವಾರ್ತಾಭಾರತಿ31 Jan 2018 9:56 PM IST
share
ಬಹುನಿರೀಕ್ಷೆಯ ಬಜೆಟ್-2018 ನಾಳೆ ಮಂಡನೆ

ಹೊಸದಿಲ್ಲಿ,ಜ.31: ವಿತ್ತಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಸಂಸತ್ತಿನಲ್ಲಿ ಎನ್‌ಡಿಎ ಸರಕಾರದ ಐದನೇ ಮುಂಗಡಪತ್ರವನ್ನು ಮಂಡಿಸಲಿದ್ದಾರೆ. ಎಲ್ಲರ ನಿರೀಕ್ಷೆಯ ಕಣ್ಣುಗಳು ಅವರ ಮೇಲೆಯೇ ಇವೆ. ಹೀಗಾಗಿ ಕೃಷಿ ಸಂಕಷ್ಟಕ್ಕೆ ಪರಿಹಾರ ಮತ್ತು ಉದ್ಯೋಗ ಸೃಷ್ಟಿಗೆ ಮಾರ್ಗ ಕಂಡುಕೊಳ್ಳಬೇಕಾದ ಮತ್ತು ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವ ಅನಿವಾರ್ಯತೆಯ ಜವಾಬ್ದಾರಿ ನಿರ್ವಹಿಸಬೇಕಿರುವ ಜೊತೆಗೆ ಇದೇ ವೇಳೆ ಆರ್ಥಿಕ ಬುದ್ಧಿವಂತಿಕೆಯನ್ನೂ ಪ್ರದರ್ಶಿಸಬೇಕಿರುವುದರಿಂದ ಜೇಟ್ಲಿ ಅವರ ಪಾಲಿಗಂತೂ ಇದು ಕಠಿಣ ಮುಂಗಡಪತ್ರವಾಗಲಿದೆ.

ಬಿಜೆಪಿಯ ಆಡಳಿತವಿರುವ ಮೂರು ಪ್ರಮುಖ ರಾಜ್ಯಗಳು ಸೇರಿದಂತೆ ಮುಂಬರುವ ಎಂಟು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಮತ್ತು ಮುಂದಿನ ವರ್ಷ ನಡೆಯಲಿ ರುವ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಈ ಮುಂಗಡಪತ್ರದಲ್ಲಿ ಹೊಸ ಗ್ರಾಮೀಣ ಯೋಜನೆಗಳು ಘೋಷಣೆಯಾಗುವ ನಿರೀಕ್ಷೆಗಳಿವೆ. ಜೊತೆಗೆ ನರೇಗಾದಂತಹ ಹಾಲಿ ಗ್ರಾಮೀಣ ಕಾರ್ಯಕ್ರಮಗಳಿಗೂ ಹೆಚ್ಚಿನ ಆರ್ಥಿಕ ನೆರವು ದೊರೆಯುವ ಸಾಧ್ಯತೆಗಳು ದಟ್ಟವಾಗಿವೆ.

ಇತ್ತೀಚಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮತಗಳಿಕೆ ಪ್ರಮಾಣ ಕುಸಿದಿರುವ ಹಿನ್ನೆಲೆಯಲ್ಲಿ ಜೇಟ್ಲಿ ಅವರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹಗಳನ್ನು ಪ್ರಕಟಿಸಬಹುದು.

 ಸಾಂಪ್ರದಾಯಿಕವಾಗಿ ಬಿಜೆಪಿಯನ್ನು ಬೆಂಬಲಿಸುತ್ತಲೇ ಬಂದಿರುವ ಸಣ್ಣ ಉದ್ಯಮಗಳು ಗೊಂದಲಗಳ ಮಧ್ಯೆಯೇ ಜಾರಿಗೊಂಡ ಜಿಎಸ್‌ಟಿ ಮತ್ತು ನೋಟು ಅಮಾನ್ಯದಿಂದ ಅನುಭವಿಸಿದ್ದ ಕಷ್ಟಗಳಿಗೆ ಸ್ವಲ್ಪ ಪರಿಹಾರವನ್ನೂ ಈ ಮುಂಗಡಪತ್ರದಲ್ಲಿ ನಿರೀಕ್ಷಿಸಬಹುದಾಗಿದೆ.

ಜೇಟ್ಲಿಯವರು ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸುವ ಮೂಲಕ ಆದಾಯ ತೆರಿಗೆಯಲ್ಲಿ ಕೊಂಚ ಪರಿಹಾರ ಕಲ್ಪಿಸಬಹುದು ಎಂದು ಜನಸಾಮಾನ್ಯರು ಕನಸು ಕಾಣುತ್ತಿದ್ದಾರೆ. ಸ್ವಲ್ಪ ಮಟ್ಟಿಗೆ ಈ ಕನಸು ನನಸಾಗುವ ನಿರೀಕ್ಷೆಯಂತೂ ಇದೆ.

ನಾಲ್ಕು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿರುವ ಆರ್ಥಿಕತೆಯ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಲು ಹೆದ್ದಾರಿಗಳಂತಹ ಮೂಲಸೌಕರ್ಯ ಯೋಜನೆಗಳು ಮತ್ತು ರೈಲ್ವೆ ಆಧುನೀಕರಣಕ್ಕೆ ವೆಚ್ಚವನ್ನು ಹೆಚ್ಚಿಸಲು ಜೇಟ್ಲಿ ಮನಸ್ಉ ಮಾಡಬಹುದು. ಆದರೆ ಇವೆಲ್ಲವನ್ನೂ ಅವರು ಮುಂಗಡಪತ್ರ ಕೊರತೆಯನ್ನು ತಗ್ಗಿಸುವ ಮಾರ್ಗಸೂಚಿಗೆ ಅಂಟಿಕೊಂಡೇ ಮಾಡಬೇಕಾಗಿದೆ. ಇದರಲ್ಲಿ ವಿಫಲರಾದರೆ ಜಾಗತಿಕ ಹೂಡಿಕೆದಾರರು ಮತ್ತು ಕಳೆದ ವರ್ಷವಷ್ಟೇ ಅಪರೂಪಕ್ಕೆ ದೇಶದ ಆರ್ಥಿಕತೆಯನ್ನು ಮೇಲ್ದರ್ಜೆಗೇರಿಸಿದ್ದ ರೇಟಿಂಗ್ ಏಜೆನ್ಸಿಗಳ ಅವಕೃಪೆಗೆ ಭಾರತವು ಗುರಿಯಾಗಬೇಕಾಗಬಹುದು.

ವಿತ್ತೀಯ ಕೊರತೆಯನ್ನು ಹಾಲಿ ಆರ್ಥಿಕ ವರ್ಷದಲ್ಲಿ ಜಿಡಿಪಿಯ ಶೇ.3.2ಕ್ಕೆ ಮತ್ತು 2018-19ರಲ್ಲಿ ಶೇ.3ಕ್ಕೆ ತಗ್ಗಿಸಲು ಜೇಟ್ಲಿ ಈ ಹಿಂದೆ ಗುರಿಯನ್ನು ನಿಗದಿಗೊಳಿಸಿದ್ದರು.

 ಜನರನ್ನು ಆಕರ್ಷಿಸುವ ಯೋಜನೆಗಳನ್ನು ಪ್ರಕಟಿಸಲು ಮುಂಗಡಪತ್ರವು ಸಾಧನವಾಗ ದಿರಬಹುದು ಮತ್ತು ಶ್ರೀಸಾಮಾನ್ಯರು ಹೆಚ್ಚಿನ ಸೌಲಭ್ಯಗಳನ್ನು ಬಯಸುತ್ತಾರೆ ಎನ್ನುವುದು ಕೇವಲ ಮಿಥ್ಯೆ ಎಂದು ಸುಳಿವು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಸಾರ್ವಜನಿಕ ನಿರೀಕ್ಷೆಗಳಿಗೆ ಕಡಿವಾಣ ಹಾಕಿದಂತಿದೆ.

ಗುರುವಾರದ ಮುಂಗಡಪತ್ರ ಜಿಎಸ್‌ಟಿ ಜಾರಿಗೊಂಡ ನಂತರದ ಮೊದಲ ಬಜೆಟ್ ಆಗಿದ್ದು, ಏಷ್ಯಾದ ಮೂರನೇ ಬೃಹತ್ ಆರ್ಥಿಕತೆಯ ಬೆಳವಣಿಗೆಗೆ ಉತ್ತೇಜನ ನೀಡಲು ಜೇಟ್ಲಿಯವರು ಏನು ಕಸರತ್ತು ಮಾಡಲಿದ್ದಾರೆ ಎನ್ನುವುದನ್ನು ಕುತೂಹಲದಿಂದ ಕಾಯಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X