ಭೂ-ಅಭಿವೃದ್ಧಿ ಸಹಕಾರಿ ಬ್ಯಾಂಕ್‌ನಲ್ಲಿ ಮಾರಾಮಾರಿ: ತನಿಖೆಗೆ ಆಗ್ರಹ
ಉಡುಪಿ, ಜ.31: ಸಹಕಾರಿ ತತ್ವದಡಿಯಲ್ಲಿ ಸೇವೆ ಮಾಡುವ ಉದ್ದೇಶದಿಂದ ಪ್ರಾರಂಭಗೊಂಡ ಉಡುಪಿ ತಾಲೂಕು ಭೂ ಅಭಿವೃದ್ಧಿ ಸಹಕಾರಿ ಬ್ಯಾಂಕ್‌ನಲ್ಲಿ ಕಾಂಗ್ರೆಸ್ ಬೆಂಬಲಿತ ಬ್ಯಾಂಕಿನ ಹಾಲಿ ಮತ್ತು ಮಾಜಿ ಅಧ್ಯಕ್ಷರು ಬ್ಯಾಂಕಿನ ಮುಖ್ಯ ಕಛೇರಿಯಲ್ಲಿ ಮಾರಾಮಾರಿಯಲ್ಲಿ ತೊಡಗಿದ್ದರು ಎಂದು ಉಡುಪಿ ಜಿಲ್ಲಾ ಬಿಜೆಪಿ ಆರೋಪಿಸಿದೆ.
ಇದರಿಂದ ಈ ಸಹಕಾರಿ ಸಂಸ್ಥೆಯ ಮೇಲೆ ಜನರಿಗೆ ಇರುವ ವಿಶ್ವಾಸಕ್ಕೆ ಧಕ್ಕೆ ಬಂದಿದ್ದು, ಬ್ಯಾಂಕಿನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆಗಿರುವ ಬಗ್ಗೆ ಗುಮಾನಿ ಇದೆ. ಈ ಬಗ್ಗೆ ಸಹಕಾರ ಇಲಾಖೆ ಕೂಡಲೇ ಮಧ್ಯಪ್ರವೇಶಿಸಿ ಇಲ್ಲಿ ನಡೆದಿರಬಹುದಾದ ಅವ್ಯಹಾರ ಹಾಗೂ ಹಗರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಬಿಜೆಪಿ ಹೇಳಿಕೆಯಲ್ಲಿ ಆಗ್ರಹಿಸಿದೆ.
Next Story





