Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾರ್ವಜನಿಕರೊಂದಿಗೆ ಗೌರವಯುತವಾಗಿ...

ಸಾರ್ವಜನಿಕರೊಂದಿಗೆ ಗೌರವಯುತವಾಗಿ ನಡೆದುಕೊಳ್ಳದಿದ್ದರೆ ಕಾನೂನು ಕ್ರಮ: ಬಿಬಿಎಂಪಿಗೆ ಹೈಕೋರ್ಟ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ1 Feb 2018 9:12 PM IST
share
ಸಾರ್ವಜನಿಕರೊಂದಿಗೆ ಗೌರವಯುತವಾಗಿ ನಡೆದುಕೊಳ್ಳದಿದ್ದರೆ ಕಾನೂನು ಕ್ರಮ: ಬಿಬಿಎಂಪಿಗೆ ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು, ಫೆ.1: ಕರ್ತವ್ಯ ನಿರ್ವಹಣೆ ವೇಳೆ ಸಾರ್ವಜನಿಕರೊಂದಿಗೆ ಗೌರವಯುತವಾಗಿ ನಡೆದುಕೊಳ್ಳದಿದ್ದರೆ ಕಾನೂನು ಕ್ರಮಕ್ಕೆ ಆದೇಶಿಸಬೇಕಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಹೈಕೋರ್ಟ್ ಮೌಖಿಕ ಎಚ್ಚರಿಕೆ ನೀಡಿತು.

ತಮ್ಮ ನಿವೇಶನದ ಆನ್‌ಲೈನ್ ಖಾತಾ ನೋಂದಣಿ ಮಾಡಿಕೊಡಲು ನಿರಾಕರಿಸಿದ ಬಿಬಿಎಂಪಿ ಪೂರ್ವ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಕ್ರಮ ಪ್ರಶ್ನಿಸಿ ವಕೀಲರಾದ ಮೀರಾ ಮುಕುಂದ್ ಎಂಬುವವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ, ಪಾಲಿಕೆ ಅಧಿಕಾರಿಗಳ ಕಾರ್ಯ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿತು.

ಕೋರ್ಟ್ ಆದೇಶದಂತೆ ವಿಚಾರಣೆಗೆ ಖುದ್ದು ಹಾಜರಾಗಿದ್ದ ಪೂರ್ವ ವಿಭಾಗದ ಜಂಟಿ ಆಯುಕ್ತರನ್ನು ತರಾಟೆ ತೆಗೆದುಕೊಂಡ ನ್ಯಾಯಪೀಠ ಇದು ಹೀಗೆ ಮುಂದುವರೆದರೆ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೂಡಲೇ ಅರ್ಜಿದಾರ ಮಹಿಳೆ ಮನವಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಆಕೆಯ ಮನೆಗೆ ಹೋಗಿ ಆನ್‌ಲೈನ್ ಖಾತಾ ಎಂಟ್ರಿ ಮಾಡಿಕೊಡಿ ಎಂದು ನಿರ್ದೇಶಿಸಿದರು. ಜಂಟಿ ಆಯುಕ್ತರನ್ನು ಮಧ್ಯಾಹ್ನದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ಪ್ರಕರಣ ಏನು: ಕಲ್ಲಹಳ್ಳಿಯ ಕನ್ನಿಂಗ್ಟನ್ ರಸ್ತೆಯಲ್ಲಿ ಸರ್ವೆ ನಂಬರ್ 37ರಲ್ಲಿ ಪಿತ್ರಾರ್ಜಿತವಾಗಿ ಬಂದಿರುವ ನಿವೇಶನ ಹೊಂದಿರುವ ಮೀರಾಮುಕುಂದ ಅವರ ಹೆಸರಿನಲ್ಲಿ ನಿವೇಶನ ಖಾತಾ ಆಗಿದೆ. ಪ್ರತಿವರ್ಷ ತೆರಿಗೆ ಪಾವತಿಸಿದರೂ ,ಆನ್‌ಲೈನ್‌ನಲ್ಲಿ ಖಾತಾ ನೋಂದಣಿಯಾಗಿರಲಿಲ್ಲ. ಈ ಸಂಬಂಧ ಪಾಲಿಕೆಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಬಳಿಕ ಕಂದಾಯ ಅಧಿಕಾರಿ ಬಳಿ ಮನವಿ ಸಲ್ಲಿಸಲು ಹೋದಾಗ ಅಸಭ್ಯವಾಗಿ ವರ್ತಿಸಿದ್ದರು ಎಂದು ಮೀರಾ ವಾದದಲ್ಲಿ ಪೀಠಕ್ಕೆ ತಿಳಿಸಿದರು.

ಬೆಸ್ಕಾಂ ಎಂಜಿನಿಯರ್‌ಗೆ 50 ಸಾವಿರ ಠೇವಣಿ ಆದೇಶ: ಏಕಾಏಕಿ ಜಾಹೀರಾತು ಫ್ಲೆಕ್ಸ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದ ಪ್ರಕರಣದಲ್ಲಿ ಅಫಿಡವಿಟ್ ಸಲ್ಲಿಸುವಂತೆ ನೀಡಿದ್ದ ಆದೇಶ ಉಲ್ಲಂಘಿಸಿದ್ದ ಬೆಸ್ಕಾಂ ಎಂಜಿನಿಯರ್‌ವೊಬ್ಬರಿಗೆ 50 ಸಾವಿರ ರೂ.ಗಳನ್ನು ಹೈಕೋರ್ಟ್ ರಿಜಿಸ್ಟ್ರಾರ್ ಬಳಿ ಠೇವಣಿ ಇಡುವಂತೆ ನ್ಯಾ. ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ಆದೇಶಿಸಿದೆ. ಸಕಾರಣ ನೀಡದೆ ವಿದ್ಯುತ್ ಕಡಿತ ಮಾಡಿದ್ದಕ್ಕೆ 10 ಜಾಹೀರಾತು ಕಂಪನಿಗಳು ಅರ್ಜಿ ಸಲ್ಲಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X