ಪುತ್ತೂರು: ರಾಜ್ಯ ಮಟ್ಟದ ಯುವಜನ ಮೇಳಕ್ಕೆ ಚಾಲನೆ

ಪುತ್ತೂರು, ಫೆ. 1: ರಾಜ್ಯ ಮಟ್ಟದ ಯುವಜನ ಮೇಳಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ರಥಬೀದಿಯ ಬಳಿ ಗುರುವಾರ ಸಂಜೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ಚಾಲನೆ ನೀಡಿದರು.
ಯುವಜನ ಮೇಳದಲ್ಲಿ ಪಾಲ್ಗೊಂಡ ಎಲ್ಲಾ ತಂಡಗಳು ವಿವಿಧ ವೇಷ ಭೂಷಣದೊಂದಿಗೆ ಉದ್ಘಾಟನಾ ಸಂದರ್ಭದಲ್ಲಿ ವಿಶೇಷ ಮೆರುಗು ನೀಡಿದವು. ಈ ಮೂಲಕ ಮೆರವಣಿಗೆ ವಿವಿಧ ಆಕರ್ಷಣೆಯೊಂದಿಗೆ ನೋಡುಗರಿಗೆ ಕಣ್ಮನ ಸೆಳೆಯುವಂತೆ ಮಾಡಿತು. ಒಟ್ಟಿನಲ್ಲಿ ಪುತ್ತೂರು ನಗರದಲ್ಲಿ ಹಬ್ಬದ ವಾತಾವರಣವೇ ಸೃಷ್ಠಿಯಾಗಿತ್ತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ರಥಬೀದಿಯಿಂದ ಆರಂಭಗೊಂಡ ಮೆರವಣಿಗೆಯು ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಮೂಲಕ ಮುಖ್ಯ ರಸ್ತೆಯಾಗಿ ಯುವಜನ ಮೇಳ ಆಯೋಜನೆಗೊಂಡ ಮಂಜಲ್ಪಡ್ಪುನಲ್ಲಿರುವ ಸುದಾನ ವಸತಿಯುತ ಶಾಲೆಯಲ್ಲಿ ಸಮಾಪನಗೊಂಡಿತು.
ಉದ್ಘಾಟನಾ ಸಂದರ್ಭ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಸುದಾನ ವಸತಿಯುತ ಶಾಲೆಯ ಧರ್ಮಗುರು ರೆ.ಫಾ. ವಿಜಯ ಹಾರ್ವಿನ್, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಪೌರಾಯುಕ್ತೆ ರೂಪಾ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಎಸ್, ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಡಿ.ಎನ್, ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಶ್ರೀರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಎ. ಹೇಮನಾಥ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಕರುಣಾಕರ ರೈ, ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಉಪಾಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು, ಶಿಶು ಅಭಿವೃದ್ಧಿ ಅಧಿಕಾರಿ ಶಾಂತಿ ಹೆಗ್ಡೆ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ತಾಲೂಕು ಯುವಜನ ಮತ್ತು ಕ್ರೀಡಾಧಿಕಾರಿ ಮಾಮಚ್ಚನ್, ನಯನಾ ರೈ, ಸುಪ್ರೀತ್ ರೈ ಖಂಡಿಗ, ಪ್ರವೀಣ್ ಚೆನ್ನಾವರ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.







