ಬಜೆಟ್ ಬೆಲೆಯೇರಿಕೆಗೆ ದಾರಿ: ಸಚಿವ ಯು.ಟಿ. ಖಾದರ್

ಮಂಗಳೂರು, ಫೆ. 1: ಕೇಂದ್ರ ಸರಕಾರ ಇಂದು ಮಂಡಿಸಿದ ಬಜೆಟ್ ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ಇನ್ನಷ್ಟು ದಾರಿ ಮಾಡಿದೆ ಎಂದು ಆಹಾರ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಸೂಟು ಬೂಟುಧಾರಿಗಳನ್ನು ಓಲೈಸಲು ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ಬಂಡವಾಳ ಶಾಹಿಗಳಿಗೆ ತೆರಿಗೆ ವಿನಾಯಿತಿ ನೀಡಿ, ಜನಸಾಮಾನ್ಯರನ್ನು ವಂಚಿಸಲಾಗಿದೆ. ಯುವ ಜನಾಂಗ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಶಾದಾಯಕವಾದ ಯಾವುದೇ ಯೋಜನೆಗಳಿಲ್ಲ ಎಂದು ಸಚಿವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
Next Story





