ಭೂಮಿ-ವಸತಿ ಕಲ್ಪಿಸಲು ಉನ್ನತ ಮಟ್ಟದ ಸಮಿತಿ ರಚನೆ
ಬೆಂಗಳೂರು, ಫೆ. 1: ರಾಜ್ಯದಲ್ಲಿನ ಭೂರಹಿತ ಮತ್ತು ವಸತಿರಹಿತ ಜನರಿಗೆ ಭೂಮಿ ಮತ್ತು ವಸತಿ ಕಲ್ಪಿಸಲು ರಾಜ್ಯ ಸರಕಾರ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಗುರುವಾರ ಅಧಿಕೃತ ಆದೇಶ ಹೊರಡಿಸಲಾಗಿದೆ.
2017ರ ಡಿ.3ರಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಒತ್ತಾಯದ ಹಿನ್ನೆಲೆಯಲ್ಲಿ ಸಮಿತಿ ರಚಿಸಿದ್ದು, ಭೂರಹಿತ ಮತ್ತು ವಸತಿರಹಿತರ ಸಮಸ್ಯೆಗಳ ಪರಿಶೀಲಿಸಲಿದೆ. ಅಲ್ಲದೆ, ತೆಗೆದುಕೊಳ್ಳಲಿರುವ ಕ್ರಮಗಳ ಬಗ್ಗೆ ಉನ್ನತ ಮಟ್ಟದ ಸಮಿತಿ ಸಮಾಲೋಚನೆ ನಡೆಸಲಿದೆ.
ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಟಿ.ಎಂ.ವಿಜಯಭಾಸ್ಕರ್ ಅಧ್ಯಕ್ಷರಾಗಿದ್ದು, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ದಿ ಹಾಗೂ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸದಸ್ಯರಾಗಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Next Story





