Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಂಗಳೂರಿನಿಂದ ಹೊರಟಿದ್ದ ರೈಲಲ್ಲಿ...

ಮಂಗಳೂರಿನಿಂದ ಹೊರಟಿದ್ದ ರೈಲಲ್ಲಿ ಚಿತ್ರನಟಿಗೆ ಲೈಂಗಿಕ ಕಿರುಕುಳ

ವಾರ್ತಾಭಾರತಿವಾರ್ತಾಭಾರತಿ2 Feb 2018 9:45 AM IST
share
ಮಂಗಳೂರಿನಿಂದ ಹೊರಟಿದ್ದ ರೈಲಲ್ಲಿ ಚಿತ್ರನಟಿಗೆ ಲೈಂಗಿಕ ಕಿರುಕುಳ

ತಿರುವನಂತಪುರ, ಫೆ. 2: ಮಂಗಳೂರಿನಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ಮಾವೇಲಿ ಎಕ್ಸ್‌ಪ್ರೆಸ್ ರೈಲಿನ 2 ಟೈರ್ ಹವಾನಿಯಂತ್ರಿತ ಬೋಗಿಯಲ್ಲಿ ಮಲೆಯಾಳಂ ಚಿತ್ರನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

23 ವರ್ಷದ ಮಲೆಯಾಳಂ ನಟಿ, ಆರೋಪಿಯ ವಿರುದ್ಧ ಸೆಟೆದೆದ್ದು, ಸಮಯ ಪ್ರಜ್ಞೆ ಮೆರೆದ ಪರಿಣಾಮ, ಹೆಚ್ಚಿನ ಅನಾಹುತ ತಪ್ಪಿದೆ. ಸಹ ಪ್ರಯಾಣಿಕರು ನೆರವಿಗೆ ಬರುವವರೆಗೂ ಚಿತ್ರನಟಿ ಆರೋಪಿಯನ್ನು ಹಿಡಿದಿಟ್ಟುಕೊಂಡಿದ್ದರು.

"ನನಗೆ ಎಚ್ಚರವಾದಾಗ ಆರೋಪಿ ನನ್ನ ತುಟಿ ಮೇಲೆ ಕೈಯಾಡಿಸುತ್ತಿದ್ದ" ಎಂದು ನಟಿ ಘಟನೆಯನ್ನು ವಿವರಿಸಿದ್ದಾರೆ. ಅವರು ಕಣ್ಣೂರಿನಲ್ಲಿ ರೈಲು ಹತ್ತಿದ್ದು, ಮೇಲಿನ ಬರ್ತ್‌ನಲ್ಲಿ ನಿದ್ರಿಸುತ್ತಿದ್ದರು. "ಗಾಬರಿಗೊಂಡು ಆತನ ಬೆರಳನ್ನು ತಿರುಚಿದೆ. ಕೆಳಗೆ ಇದ್ದ ಸಹಪ್ರಯಾಣಿಕನನ್ನು ಸಹಾಯಕ್ಕಾಗಿ ಯಾಚಿಸಿದೆ. ಆದರೆ ಆತ ತಲೆ ಕೆಡಿಸಿಕೊಳ್ಳಲಿಲ್ಲ. ಎಷ್ಟು ಬೊಬ್ಬೆ ಹಾಕಿದರೂ ಯಾರೂ ಸ್ಪಂದಿಸಲಿಲ್ಲ. ಮುಂಜಾನೆ 1.10ರ ವೇಳೆಗೆ ಈ ಘಟನೆ ನಡೆದಿದ್ದು, ಕೊನೆಗೆ ಚಿತ್ರಕಥೆ ಬರೆಯುವ ಉಣ್ಣಿ ಹಾಗೂ ಸಹ ಪ್ರಯಾಣಿಕ ರಂಜಿತ್ ನೆರವಿಗೆ ಮುಂದಾದರು" ಎಂದು ಎನ್‌ಡಿಟಿವಿಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಈ ಇಬ್ಬರು ತಕ್ಷಣ ಟಿಟಿಇಗೆ ವಿಷಯ ಮುಟ್ಟಿಸಿದ್ದಾರೆ. ಈ ಮಧ್ಯೆ ಆರೋಪಿ ಎಲ್ಲೂ ಹೋಗದಂತೆ ನಟಿ ಹಿಡಿದಿಟ್ಟುಕೊಂಡಿದ್ದರು. ಟಿಟಿಇ ಬಂದ ತಕ್ಷಣ ಮುಂದಿನ ನಿಲ್ದಾಣದ ರೈಲ್ವೆ ಪೊಲೀಸರಿಗೆ ವಿಷಯ ಮುಟ್ಟಿಸಿದರು. ಅರ್ಧ ಗಂಟೆ ಬಳಿಕ ತ್ರಿಶ್ಶೂರಿಗೆ ರೈಲು ಆಗಮಿಸಿದಾಗ ಆತನನ್ನು ರೈಲ್ವೆ ಪೊಲೀಸರು ಬಂಧಿಸಿದರು ಎಂದು ವಿವರಿಸಿದ್ದಾರೆ. ಪೊಲೀಸರಿಗೆ ಹೇಳಿಕೆ ನೀಡಿದ ಬಳಿಕ ನಟಿ ಪ್ರಯಾಣ ಮುಂದುವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X