ಮಂಡ್ಯ: ಸಂತೋಷ್ ಕೊಲೆ ಖಂಡಿಸಿ ಪ್ರತಿಭಟನೆ
ಮಂಡ್ಯ, ಫೆ.2: ಬೆಂಗಳೂರಿನ ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ. ಬಿಜೆಪಿ ಕಾರ್ಯಕರ್ತರ ನಿರಂತರ ಕೊಲೆ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಸರಕಾರ ಬಿಜೆಪಿ, ಸಂಘಪರಿವಾರ ಕಾರ್ಯಕರ್ತರ ಕೊಲೆಗಳಿಗೆ ಕಡಿವಾಣ ಹಾಕಬೇಕು. ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ನಾಗಣ್ಣಗೌಡ, ನಗರಾಧ್ಯಕ್ಷ ಎಚ್.ಆರ್.ಅರವಿಂದ್, ಶಿವು, ಶಿವಕುಮಾರಾಧ್ಯ, ಇತರರು ಪಾಲ್ಗೊಂಡಿದ್ದರು.
Next Story