ಫೆ.3 ರಂದು ಆಶಾ ಕಾರ್ಯಕರ್ತೆಯರ ಸಮಾವೇಶ
ಬೆಂಗಳೂರು, ಫೆ. 2: ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.3 ರಂದು ಬೆಳಗ್ಗೆ 11:30ಕ್ಕೆ ಇಲ್ಲಿನ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿನ ಡಾ.ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ಆಶಾ ಕಾರ್ಯಕರ್ತೆಯರ ಸಮಾವೇಶವನ್ನು ಏರ್ಪಡಿಸಲಾಗಿದೆ.
ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಸಮಾವೇಶ ಉದ್ಘಾಟಿಸಲಿದ್ದು, ಗೃಹ ಸಚಿವ ರಾಮಲಿಂಗಾರೆಡ್ಡಿ, ನಗರಾಭಿವೃದ್ಧಿ ಸಚಿವ ರೋಷನ್ ಬೇಗ್, ಬಿಬಿಎಂಪಿ ಮೇಯರ್ ಸಂಪತ್‌ರಾಜ್, ಎಸ್‌ಯುಸಿಐ ರಾಜ್ಯ ಸಮಿತಿ ಸದಸ್ಯೆ ಕೆ.ಉಮಾ, ಉಪಾಧ್ಯಕ್ಷ ಕೆ.ವಿ.ಭಟ್, ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ರಮಾ ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
Next Story





