ಫೆ.4: ಜಾಮಿಯಾ ಇಸ್ಲಾಮಿಯಾದಲ್ಲಿ ಕೋಮು ಸೌಹಾರ್ದ ಕಾರ್ಯಕ್ರಮ
ಭಟ್ಕಳ, ಫೆ. 3: ಆಲ್ ಇಂಡಿಯಾ ಮೆಸೇಜ್ ಆಫ್ ಹ್ಯೂಮ್ಯಾನಿಟಿ ಫೋರಂ ವತಿಯಿಂದ ಹೆಬಳೆ ಪಂಚಾಯತ್ ವ್ಯಾಪ್ತಿಯ ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆಯಲ್ಲಿ ಫೆ.4ರಂದು ಬೆಳಗ್ಗೆ 11ಗಂಟೆಗೆ ಕೋಮು ಸೌಹಾರ್ದ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಶಫಿ ಶಾಬಂದ್ರಿ ಹಾಗೂ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಲ್ಯಾಸ್ ನದ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖ್ಯಾತ ವಿದ್ವಾಂಸ ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ರಾಷ್ಟ್ರೀಯ ಅಧ್ಯಕ್ಷ ಮೌಲಾನ ಮುಹಮ್ಮದ್ ರಾಬೆಅ ಹಸನಿ ನದ್ವಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಗೌರವ ಅತಿಥಿಯಾಗಿ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮಾಂಕಾಳ್ ವೈದ್ಯ ಹಾಗೂ ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ ಡಾ.ಶಂಕರ್ ಬಿದ್ರಿ ಆಗಮಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಸ್ವಾತಂತ್ರ್ಯ ಭಾರತದಲ್ಲಿ ಕೋಮು ಸೌಹಾರ್ದತೆಯ ಮಹತ್ವ ಎಂಬ ವಿಷಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







