ಕಾರು ಢಿಕ್ಕಿ: ಮಹಿಳೆ ಮೃತ್ಯು
ಕೋಟ, ಫೆ.3: ಹೊಂಬಾಡಿ ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಫೆ. 2ರಂದು ಸಂಜೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಸಂಕು ಪೂಜಾರ್ತಿ(65) ಎಂದು ಗುರುತಿಸಲಾಗಿದೆ. ಹುಣ್ಸೆಮಕ್ಕಿ ಮಾರ್ಕೆಟ್ ಕಡೆಯಿಂದ ಕೋಟೇಶ್ವರ ಕಡೆಗೆ ರಸ್ತೆ ಬದಿ ನಡೆದುಕೊಂಡು ಹೋಗು ತ್ತಿದ್ದ ಸಂಕು ಪೂಜಾರ್ತಿಗೆ ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





