Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜದಲ್ಲಿ ಕಂದಕ ಸೃಷ್ಠಿಸುವಂತಹ...

ಸಮಾಜದಲ್ಲಿ ಕಂದಕ ಸೃಷ್ಠಿಸುವಂತಹ ಸಂಕ್ರಮಣದಲ್ಲಿದ್ದೇವೆ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ3 Feb 2018 10:50 PM IST
share
ಸಮಾಜದಲ್ಲಿ ಕಂದಕ ಸೃಷ್ಠಿಸುವಂತಹ ಸಂಕ್ರಮಣದಲ್ಲಿದ್ದೇವೆ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಮಂಡ್ಯ, ಫೆ.3: ಸಮಾಜದಲ್ಲಿ ಕಂದಕ ಸೃಷ್ಠಿಸುವಂತಹ ಸಂಕ್ರಮಣ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿರುವ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಅದನ್ನು ಸಂಸ್ಕೃತಿಯ ಮೂಲಕ ಬೆಸೆಯುವ ಕಾರ್ಯವನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ.

ಸಾಂಸ್ಕೃತಿಕ ಒಕ್ಕೂಟ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಲಾಮಂದಿರದಲ್ಲಿ ಶನಿವಾರ ನಡೆದ ಸಂಕ್ರಾಂತಿ ಸಂಭ್ರಮ ಸಾಂಸ್ಕೃತಿಕ ಉತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮನುಷ್ಯ ಮಾನಸಿಕವಾಗಿ ಪ್ರಬುದ್ಧನಾಗಿದ್ದರೂ, ಭೌತಿಕವಾಗಿ ಪ್ರಬುದ್ಧನಾಗಿಲ್ಲ. ಆದ ಕಾರಣ ಸಮಾಜದಲ್ಲಿ ಅಶಾಂತಿಯ ಹೊಗೆಯಾಡುತ್ತಿದೆ. ಪಂಚೇಂದ್ರಿಯಗಳನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕಿದೆ ಎಂದು ಅವರು ತಿಳಿಸಿದರು.

ಎಲ್ಲರನ್ನೂ ಸುಸಂಸ್ಕೃತರನ್ನಾಗಿ ಒಟ್ಟಿಗೆ ಕರೆದೊಯ್ಯುವ ಕೆಲಸ ಆಗಬೇಕಿದೆ. ಇದು ಸಾಂಸ್ಕೃತಿಕ ಉತ್ಸವಗಳು ಮತ್ತು ವಾತಾವರಣದಿಂದ ಮಾತ್ರ ಸಾಧ್ಯ. ಸಂಗೀತದಿಂದ ಮನಸ್ಸು ಪ್ರಫುಲ್ಲವಾಗುತ್ತದೆ. ನೋವು, ದುಃಖ, ದುಮ್ಮಾನಗಳನ್ನು ದೂರ ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಸಂಗೀತವೂ ಸುಲಭವಾಗಿ ಒಲಿಯುವುದಿಲ್ಲ. ಸತತ ಸಾಧನೆ, ಪರಿಶ್ರಮ ಬೇಕಾಗುತ್ತದೆ. ಸಂಗೀತದಲ್ಲಿ ಸ್ವಲ್ಪವೂ ಅಪಸ್ವರ ಬಾರದಂತೆ ನುಡಿಸುವುದು, ನಡೆಯುವುದು ಮುಖ್ಯ. ಹೊಗಳಿಕೆಗೆ ಕಿವಿಕೊಟ್ಟಲ್ಲಿ ಸಂಗೀತ ಸಿದ್ಧಿಸುವುದಿಲ್ಲ ಎಂದು ಅವರು ಕಿವಿಮಾತು ಹೇಳಿದರು.

ದೆಹಲಿ ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಂ.ನಾಗರಾಜು, ಉದ್ಯಮಿ ಎಸ್. ಲೋಕೇಶ್, ಪರಿಸರ ಅಧಿಕಾರಿ ಮಂಜುನಾಥ್, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶಗೌಡ, ಒಕ್ಕೂಟದ ಪದಾಧಿಕಾರಿಗಳಾದ ಎಂ.ಕೆ.ಹರೀಶ್‍ಕುಮಾರ್, ಜಯರಾಂ, ಸೋಮಶೇಖರ್ ಇತರರು ಉಪಸ್ಥಿತರಿದ್ದರು.

ವಿಕಲಚೇತನ ನೃತ್ಯಪಟು ಎಸ್.ಬೂಸೇಗೌಡ ಹಾಗೂ ನಿವೃತ್ತ ಅಧಿಕಾರಿ ಎಚ್.ಎಸ್. ಗೋವಿಂದೇಗೌಡ ಅವರನ್ನು ಸನ್ಮಾನಿಸಲಾಯಿತು. ಬೆಂಗಳೂರಿನ ಪ್ರವೀಣ್ ಡಿ.ರಾವ್ ಮತ್ತು ತಂಡದವರು ಸಂಗೀತ ಫ್ಯೂಷನ್ ನಡೆಸಿಕೊಟ್ಟರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X