Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರತ ವಿಭಿನ್ನ ಆಚಾರ-ವಿಚಾರ,...

ಭಾರತ ವಿಭಿನ್ನ ಆಚಾರ-ವಿಚಾರ, ಸಂಸ್ಕೃತಿ-ಧರ್ಮಗಳ ದೇಶ: ಮೌಲಾನ ರಾಬೆಅ ನದ್ವಿ

ಭಟ್ಕಳ: ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆಯಲ್ಲಿ ಸೌಹಾರ್ದ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ4 Feb 2018 8:36 PM IST
share
ಭಾರತ ವಿಭಿನ್ನ ಆಚಾರ-ವಿಚಾರ, ಸಂಸ್ಕೃತಿ-ಧರ್ಮಗಳ ದೇಶ: ಮೌಲಾನ ರಾಬೆಅ ನದ್ವಿ

ಭಟ್ಕಳ, ಫೆ. 4: ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ವಿಭಿನ್ನ ಆಚಾರ-ವಿಚಾರ, ಧರ್ಮ,ಸಂಸ್ಕೃತಿಯ ದೇಶವಾಗಿದ್ದು ಮನುಷ್ಯರೆಂಬ ನೆಲೆಯಲ್ಲಿ ಇಲ್ಲಿನ ಹಿಂದೂ-ಮುಸ್ಲಿಮರು ಏಕತೆಯನ್ನು ಪ್ರದರ್ಶಿಸುವುದು ಕಾಲದ ಬೇಡಿಕೆಯಾಗಿದೆ ಎಂದು ಅಖಿಲಾ ಭಾರತ ಮಾನವೀಯತೆ ಸಂದೇಶ ವೇದಿಕೆ ಹಾಗೂ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ ರಾಷ್ಟ್ರೀಯ ಅಧ್ಯಕ್ಷ ಮೌಲಾನ ಮುಹಮ್ಮದ್ ರಾಬೆಅ ಹಸನಿ ನದ್ವಿ ಹೇಳಿದರು.

ಅವರು ರವಿವಾರ ಹೆಬಳೆ ಗ್ರಾ.ಪಂ.ವ್ಯಾಪ್ತಿಯ ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆ ಆಯೋಜಿಸಿದ್ದ ಮೆಸೇಜ್ ಆಫ್ ಹ್ಯುಮ್ಯಾನಿಟಿಯ ಸೌಹಾರ್ದ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.

ಹಿಂದೂ- ಮುಸ್ಲಿಮರು ಪರಸ್ಪರ ಸಹಬಾಳ್ವೆ ನಡೆಸಿದ ಇತಿಹಾಸವುಳ್ಳ ಭಾರತ ಇಂದು ರಾಜಕೀಯ ಹಿತಾಸಕ್ತಿಗೆ ಒಳಗಾಗಿ ಮನುಷ್ಯ ಮನುಷ್ಯರನ್ನು ಇರಿಯುವ, ಪೈಶಾಚಿಕ ಚಿಂತನೆಗಳನ್ನು ಹುಟ್ಟುಹಾಕುತ್ತಿದೆ. ಅಂದಿನ ಭಾರತ ಇಂದಿಗೂ ಪ್ರಸ್ತುತವಾಗಿದ್ದು ಇಲ್ಲಿ ಬಹುಸಂಖ್ಯಾತರು ಕೂಡಿ ಬಾಳುತ್ತಿದ್ದಾರೆ. ಬೆರಳೆಣಿಕೆಯ ಮಂದಿ ಪರಸ್ಪರರನ್ನು ಕಚ್ಚಾಡಿಸುತ್ತಿದ್ದು ನಾವೆಲ್ಲರೂ ಮನುಷ್ಯರು ಎಂದು ಮತ್ತೆ ಅವರಿಗೆ ಮನವರಿಕೆ ಮಾಡಿಕೊಡುವ ಕೆಲಸವಾಗಬೇಕಾಗಿದೆ. ಒಬ್ಬರು ಮತ್ತೊಬ್ಬರನ್ನು ಸಹಾನುಭೂತಿ, ಅನುಕಂಪಗಳಿಂದ ಕಾಣುವಂತಾಬೇಕು, ನಮ್ಮಲ್ಲಿನ ವಿಚಾರ ಭಿನ್ನತೆಗಳನ್ನು ಬದಿಗಿಟ್ಟು ದೇಶದ ಪ್ರಗತಿಗಾಗಿ ಶ್ರಮಿಸಬೇಕಾಗಿದೆ, ಚಿಕಿತ್ಸೆ ಮಾಡುವ ವೈದ್ಯ ರೋಗಿಯನ್ನು ಯಾವ ಧರ್ಮದವನು ಎಂದು ಕೇಳದೆ ಚಿಕತ್ಸೆಯನ್ನು ನೀಡುತ್ತಾನೆ. ಮನುಷ್ಯ ಮನುಷ್ಯರು ಹೊಡೆದಾಗಿ ಗಲಭೆಗಳನ್ನು ಸೃಷ್ಟಿಸಿದರೆ ಅದರಿಂದಾಗಿ ಇಬ್ಬರಿಗೂ ನಷ್ಟವೇ ಹೊರತು ಯಾವ ಲಾಭವು ಆಗದು. ಇಸ್ಲಾಮ್ ಮನುಷ್ಯರನ್ನು ಪ್ರೀತಿಸುವಂತೆ, ನೆರೆಮನೆಯವರನ್ನು ಸಹೋದರರಂತೆ ಕಾಣಬೇಕೆಂಬ ಆದೇಶ ನೀಡಿದೆ ಎಂದು.

'ವಾರ್ತಾಭಾರತಿ'ಯ ಪ್ರಧಾನ ಸಂಪಾದಕ ಎ.ಎಸ್. ಪುತ್ತಿಗೆ ಮಾತನಾಡಿ, ಭಾರತದಲ್ಲಿ ಧರ್ಮಗಳು ಹೊಸದೇನಲ್ಲ, ಆದರೆ ಸೌಹಾರ್ದ ಸಭೆಗಳು ಮಾತ್ರ ಹೊಸತು. ಕಳೆದ ಎರಡು ದಶಕಗಳಿಂದ ಆರಂಭಗೊಂಡ ಸೌಹಾರ್ದ ಸಭೆಗಳು ನಮ್ಮಲ್ಲಿ ಸೌಹಾರ್ದತೆಯ ಕೊರತೆಯನ್ನು ಎತ್ತಿ ತೋರಿಸುತ್ತಿದೆ. ಸೌಹಾರ್ದ ಸಮಾವೇಶಗಳ ಅಗತ್ಯತೆ ಏಕೆ ಎನ್ನುವ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅಗತ್ಯತೆ ಇಂದು ಉಂಟಾಗುತ್ತಿದೆ. ಸಮಾಜದಲ್ಲಿ ಮಸೀದಿ, ದೇವಸ್ಥಾನ, ಧಾರ್ಮಿಕ ಸಭೆಗಳು ಹೆಚ್ಚುತ್ತಿದ್ದು, ಜನರು ಹೆಚ್ಚೆಚ್ಚು ಧಾರ್ಮಿಕರಾಗುತ್ತಿದ್ದಾರೆ ಎನ್ನುವ ಭಾವನೆ ನಮ್ಮಲ್ಲಿ ಬೆಳೆಯುತ್ತಿದೆ. ಒಂದು ವೇಳೆ ಹೀಗಾದರೆ ನಮ್ಮಲ್ಲಿನ ಸಾಮಾಜಿಕ ಬಾಂಧವ್ಯಗಳು ಹೆಚ್ಚಾಗಬೇಕಿತ್ತು. ಆದರೆ ಹಾಗೆ ಆಗುತ್ತಿಲ್ಲ, ಬದಲಾಗಿ ನಮ್ಮಲ್ಲಿ ಇನ್ನಷ್ಟು ಅಂತರ ಹೆಚ್ಚುತ್ತಿದೆ. ಧರ್ಮದ ಸತ್ವ, ತಿರುಳು ಹಾಗೂ ಅದರ ಸಂದೇಶಗಳಿಗೆ ನಾವು ಹತ್ತಿರವಾಗದೇ ಕೇವಲ ಧಾರ್ಮಿಕ ಸಂಕೇತಗಳಿಗೆ ಮಾತ್ರ ಸೀಮಿತರಾಗಿದ್ದೇವೆ. ಐಸಿಸ್ ಎಂಬ ದುಷ್ಟಕೂಟವೊಂದು ಎಸಗುತ್ತಿರುವ ದುಷ್ಕೃತ್ಯಗಳು ಇಡೀ ಮಾನವ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ಆದರೆ ಅದು ಧಾರ್ಮಿಕ ಸಂಕೇತಗಳನ್ನು ಬಳಸಿಕೊಳ್ಳುವುದರ ಮೂಲಕ ಒಂದು ಇಡೀ ಧರ್ಮವೇ ಈ ದುಷ್ಕೃತ್ಯವೆಸಗಿದೆ ಎನ್ನುವಂತೆ ಮಾಡುತ್ತಿದೆ. ಧರ್ಮವನ್ನು ವ್ಯಾಪಾರಿಗಳು ತಮ್ಮ ವ್ಯಾಪಾರಕ್ಕೆ, ಪುರೋಹಿತರು ತಮ್ಮ ಪೌರತ್ಯಕ್ಕಾಗಿ ಬಳಸಿಕೊಳ್ಳುತ್ತಿರುವುದು ಇಂದು ಧರ್ಮ ದುರ್ಗತಿಗೆ ತಲಪಲು ಕಾರಣವಾಗಿದೆ. ಧರ್ಮದ ದುರ್ಬಳಕೆ ತಡೆಯದೆ ಹೋದರೆ ಅದು ಅಪಾರ್ಥಕ್ಕೀಡಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ ಎಂದರು.

ಮಸೀದಿ, ಮಂದಿರ ಚರ್ಚುಗಳ ನಿರ್ಮಾಣದಿಂದಾಗಿ ಜನರಲ್ಲಿ ಧರ್ಮದ ತಿಳಿವಳಿಕೆ ಉಂಟಾಗುವುದಿಲ್ಲ. ಧರ್ಮಗಳನ್ನು ಅಧ್ಯಾಯನ ಮಾಡಿ ಅದರ ಸಾರ ವನ್ನು ಜನರಿಗೆ ತಿಳಿಸುವ, ತಿಳಿಯುವ ಪ್ರಯತ್ನ ಮಾಡಬೇಕಾಗಿದೆ ಎಂದು ಹೇಳಿದರು.

ಶಾಸಕ ಮಾಂಕಾಳ್ ವೈದ್ಯ ಮಾತನಾಡಿ, ನಮ್ಮ ದೇಶದ ಸಂವಿಧಾನ ಎಲ್ಲರೂ ಕೂಡಿ ಬಾಳುವಂತೆ ಕಲಿಸುತ್ತದೆ. ಕೇವಲ ನಾನು ಬದುಕುವುದಲ್ಲ ಇತರರು ತನ್ನಂತೆ ಸುಖವಾಗಿ ಬದುಕಬೇಕು ಎನ್ನುವ ಆದರ್ಶ ನಮ್ಮದಾಗಬೇಕು. ಭಟ್ಕಳದ ಜನತೆ ತುಂಬ ವಿಚಾರವಂತರಾಗಿದ್ದು, ಇಲ್ಲಿ ಯಾವುದೇ ವ್ಯತ್ಯಾಸ ಉಂಟಾಗಲು ಬಿಡುವುದಿಲ್ಲ. ಇತ್ತಿಚೆಗೆ ಕೆಲವು ವಿವೇಚನ ರಹಿತ ಸಂದೇಶಗಳನ್ನು ಹರಡುವುದರ ಮೂಲಕ ಇಲ್ಲಿನ ವಾತಾವರಣ ಕೆಡಿಸುವ ಪ್ರಯತ್ನಕ್ಕೆ ಕೈ ಹಾಕುತ್ತಿರುವುದು ಕಂಡು ಬರುತ್ತಿದೆ. ಇಂತಹದ್ದಕ್ಕೆಲ್ಲ ಪ್ರಜ್ಞಾವಂತ ಭಟ್ಕಳದ ಜನತೆ ಅವಕಾಶ ಮಾಡಿಕೊಡುವುದಿಲ್ಲ ಎಂದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ಗೋಪಾಲ್ ಬ್ಯಾಕೋಡ್, ಶಿರಾಲಿ ಎಂ.ಜಿ.ಎಂ ಮಂದಿರ ಅರ್ಚಕ ಡಾ. ಗಣಪತಿ ಪಿ.ಭಟ್, ತಹಶೀಲ್ದಾರ್ ವಿ.ಎನ್.ಬಾಡ್ಕರ್, ಮೌಲಾನ ಸಜ್ಜಾದ್ ನೋಮಾನಿ, ಮೌಲಾನ ಬಿಲಾಲ್ ಹಸನಿ ನದ್ವಿ, ಪ್ರೊ.ಅನೀಸ್ ಚುಶ್ತಿ, ಮೌಲಾನ ಇಲ್ಯಾಸ್ ನದ್ವಿ ಮತ್ತಿತರರು ಮಾತನಾಡಿದರು.

ಮರ್ಕಝಿ ಜಮಾಅತುಲ್ ಮುಸ್ಲಿಮೀನ್ ಖಾಝಿ ಮೌಲಾನ ಮುಲ್ಲಾ ಇಖ್ಬಾಲ್ ನದ್ವಿ, ತಂಝೀಮ್ ಅಧ್ಯಕ್ಷ ಮುಝಮ್ಮಿಲ್ ಕಾಜಿಯಾ, ಜಾಮಿಯಾ ಇಸ್ಲಾಮಿಯ ಅಧ್ಯಕ್ಷ ಮುಹಮ್ಮದ್ ಶಫಿ ಶಾಬಂದ್ರಿ ಮತ್ತಿತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X