ಗಾಂಜಾ ಮಾರಾಟ: ಓರ್ವನ ಬಂಧನ

ಶಿವಮೊಗ್ಗ, ಫೆ. 4: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಬಳಿಯ ಎರೇಕೊಪ್ಪ ಗ್ರಾಮದಲ್ಲಿ ನಡೆದಿದೆ.
ಅದೇ ಗ್ರಾಮದ ನಿವಾಸಿ ರೂಪ್ಲಾನಾಯ್ಕ್ (63) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈ ವೇಳೆ ಗಂಗಾನಾಯ್ಕ್ (31) ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯಿಂದ 1 ಕೆ.ಜಿ. 300 ಗ್ರಾಂ ತೂಕದ, ಸುಮಾರು 8000 ರೂ. ಮೌಲ್ಯದ ಗಾಂಜಾ ಸೊಪ್ಪನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story





