Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರದಲ್ಲಿ ‘ಪಕಡ್ವಾ ವಿವಾಹ’ಕ್ಕಾಗಿ...

ಬಿಹಾರದಲ್ಲಿ ‘ಪಕಡ್ವಾ ವಿವಾಹ’ಕ್ಕಾಗಿ 3,400ಕ್ಕೂ ಅಧಿಕ ವರರ ಅಪಹರಣ

ವಾರ್ತಾಭಾರತಿವಾರ್ತಾಭಾರತಿ4 Feb 2018 11:42 PM IST
share
ಬಿಹಾರದಲ್ಲಿ ‘ಪಕಡ್ವಾ ವಿವಾಹ’ಕ್ಕಾಗಿ 3,400ಕ್ಕೂ ಅಧಿಕ ವರರ ಅಪಹರಣ

ಪಾಟ್ನಾ,ಫೆ.4: ಇದು ಹಲವರಿಗೆ ಸಾಂಸ್ಕೃತಿಕ ಆಘಾತವನ್ನುಂಟು ಮಾಡಬಹುದು, ಆದರೆ ಕಳೆದ ವರ್ಷ ಬಿಹಾರದಲ್ಲಿ ‘ಪಕಡ್ವಾ ವಿವಾಹ’ವೆಂದು ಸ್ಥಳೀಯವಾಗಿ ಕರೆಯಲಾಗುವ ಬಲವಂತದ ಮದುವೆಗಾಗಿ 3,400 ಕ್ಕೂ ಅಧಿಕ ಯುವಕರನ್ನು ಅಪಹರಿಸಲಾಗಿತ್ತು.

ಬಿಹಾರದಲ್ಲಿ ಪಕಡ್ವಾ ವಿವಾಹದ ಹಾವಳಿ ಹೆಚ್ಚುತ್ತಿದೆ. ಕಳೆದ ವರ್ಷ ರಾಜ್ಯದಲ್ಲಿ ಬಲವಂತದ ಮದುವೆಗಾಗಿ ಸುಮಾರು 3,405 ಯುವಕರನ್ನು ಅಪಹರಿಸಲಾಗಿದೆ. ಪಿಸ್ತೂಲನ್ನು ತೋರಿಸಿ ಅಥವಾ ಯುವಕರಿಗೆ ಮತ್ತು ಅವರ ಕುಟುಂಬಗಳಿಗೆ ಬೆದರಿಕೆಗಳನ್ನೊಡ್ಡಿ ಈ ಪಕಡ್ವಾ ವಿವಾಹಗಳನ್ನು ನಡೆಸಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ರವಿವಾರ ಇಲ್ಲಿ ತಿಳಿಸಿದರು.

ಕಳೆದ ತಿಂಗಳು ಪಾಟ್ನಾದ ಗ್ರಾಮವೊಂದರಲ್ಲಿ ಇಂಜಿನಿಯರ್‌ವೋರ್ವನನ್ನು ಅಪಹರಿಸಿ, ಬಳಿಕ ಪಿಸ್ತೂಲು ತೋರಿಸಿ ಪಕಡ್ವಾ ವಿವಾಹ ನಡೆಸಲಾಗಿತ್ತು. ತನ್ನ ನವ ವಿವಾಹಿತ ಪತ್ನಿಯೊಡನೆ ಬಾಳು ನಡೆಸಲು ಆತ ನಿರಾಕರಿಸಿದಾಗ ಈ ಪಕಡ್ವಾ ವಿವಾಹ ರಾಷ್ಟ್ರಾದ್ಯಂತ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಲಭ್ಯ ಅಂಕಿಅಂಶಗಳಂತೆ ರಾಜ್ಯದಲ್ಲಿ 2016ರಲ್ಲಿ 3,070, 2015ರಲ್ಲಿ 3,000 ಮತ್ತು 2014ರಲ್ಲಿ 2,526 ಯುವಕರನ್ನು ಪಕಡ್ವಾ ವಿವಾಹಕ್ಕಾಗಿ ಅಪಹರಿಸಲಾಗಿತ್ತು.

ಪೊಲೀಸ್ ದಾಖಲೆಗಳು ಹೇಳುವಂತೆ ರಾಜ್ಯದಲ್ಲಿ ಪ್ರತಿದಿನ ಸರಾಸರಿ ಒಂಭತ್ತು ಪಕಡ್ವಾ ವಿವಾಹಗಳು ನಡೆಯುತ್ತಿವೆ.

ಇಂತಹ ವಿವಾಹಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯು ಮುಂದಿನ ತಿಂಗಳಿನಿಂದ ಆರಂಭಗೊಳ್ಳಲಿರುವ ಮದುವೆ ಸೀಝನ್ನಿನಲ್ಲಿ ಇಂತಹ ಘಟನೆಗಳನ್ನು ತಡೆಯಲು ಎಚ್ಚರ ವಹಿಸುವಂತೆ ಜಿಲ್ಲಾ ಎಸ್‌ಪಿಗಳಿಗೆ ಸೂಚಿಸಿದೆ.

 ಪಕಡ್ವಾ ವಿವಾಹ ಈ ರಾಜ್ಯದಲ್ಲಿ ಹೊಸದೇನೂ ಅಲ್ಲ. ಹಲವಾರು ವರ್ಷಗಳಿಂದ ಅವು ನಡೆಯುತ್ತಲೇ ಇವೆ. ಆದರೆ ಅವುಗಳ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ ಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಯಾದವ್ ಹೇಳಿದರು. ವರದಕ್ಷಿಣೆ ಪಿಡುಗಿನಿಂದಾಗಿ ಇದೊಂದು ಸಾಮಾಜಿಕ ಸಮಸ್ಯೆಯಾಗಿದೆ. ಯುವತಿಯರ ಕುಟುಂಬಗಳು ಬಲವಂತದ ಮದುವೆಗಾಗಿ ಅರ್ಹ ಯುವಕರನ್ನು ಅಪಹರಿಸುತ್ತವೆ. ಇದಕ್ಕಾಗಿ ಅವು ಸ್ನೇಹಿತರನ್ನು ಮತ್ತು ಬಂಧುಗಳನ್ನು, ಕೆಲವೊಮ್ಮೆ ವೃತ್ತಿಪರ ಕ್ರಿಮಿನಲ್‌ಗಳನ್ನು ಬಳಸಿಕೊಳ್ಳುತ್ತವೆ ಎಂದರು.

18 ವರ್ಷಕ್ಕಿಂತ ಮೇಲಿನ ಯುವಕರ ಅಪಹರಣಗಳಲ್ಲಿ ಬಿಹಾರವು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿರುವುದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕವು ದೃಢಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X